ಪಾಟ್ನಾ: ಪಾಪಿ ತಾಯಿಯೊಬ್ಬಳು (Woman) ತನ್ನ ಪ್ರಿಯಕರನ (Lover) ಹತ್ತಿರ ಹೋಗಲು ಮಗಳು ಅಡ್ಡಿಯಾಗಿದ್ದಾಳೆಂದು ಕೊಲೆ ಮಾಡಿರುವ ಘಟನೆ ನಡೆದಿದೆ.
ತಾಯಿಯೇ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಲೆ ಮಾಡಿ ಸೂಟ್ ಕೇಸ್ ಗೆ ತುಂಬಿ ಪೊದೆಯ ಬಳಿ ಎಸೆದಿರುವ ಘಟನೆ ನಡೆದಿದೆ. ಈ ಘಟನೆ ಬಿಹಾರದ (Bihar) ಮುಜಾಫರ್ ಪುರದಲ್ಲಿ ನಡೆದಿದೆ. ಸದ್ಯ ಪ್ರಕರಣ ಬೇಧಿಸಿರುವ ಪೊಲೀಸರು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ. ತಾಯಿ ಕಾಜಲ್ ಬಂಧಿತ ಆರೋಪಿ. ತನಿಖೆ ವೇಳೆ ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದು, ಪತಿಯನ್ನು ತೊರೆದು ಪ್ರಿಯಕರನೊಂದಿಗೆ ತೆರಳಲು ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾಳೆ.
ಮುಜಾಫರ್‍ಪುರದ ಮಿನಾಪುರದ ವಸತಿ ಪ್ರದೇಶದಲ್ಲಿ ಮೂರು ವರ್ಷದ ಮಗುವಿನ ಮೃತದೇಹ ಕೆಂಪು ಸೂಟ್‍ಕೇಸ್‍ನಲ್ಲಿ ಪತ್ತೆಯಾಗಿತ್ತು. ಮಗುವಿನ ಮೃತದೇಹ ಪತ್ತೆಯಾಗಿರುವುದನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕಾಜಲ್‍ನ ಪತಿ ಮನೋಜ್ ನೀಡಿದ ದೂರಿನ ಮೇಲೆ ಪೊಲೀಸರು ಮಹಿಳೆಯ ಫೋನ್ ಟ್ರ್ಯಾಕ್ ಮಾಡಿದಾಗ, ಆಕೆ ತನ್ನ ಪ್ರಿಯಕರನ ಮನೆಯಲ್ಲಿರುವುದು ಪತ್ತೆಯಾಗಿತ್ತು. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ, ಇದರಲ್ಲಿ ಪ್ರಿಯಕರನ ಪಾತ್ರ ಕಂಡು ಬಂದಿಲ್ಲ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.








