ಪಾಪಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ವಿರೋಧಿಸಿದ ಬಾಲಕಿಯನ್ನು ರೈಲಿನ ಎದುರು ಎಸೆದಿರುವ ಘಟನೆಯೊಂದು ನಡೆದಿದೆ.
17 ವರ್ಷದ ಬಾಲಕಿಯನ್ನು ಚಲಿಸುತ್ತಿದ್ದ ರೈಲಿನ ಎದುರು ಎಸೆದಿದ್ದಾನೆ ಪರಿಣಾಮ ಆಕೆಯ ಕೈ, ಕಾಲುಗಳು ಕಟ್ ಆಗಿದ್ದು, ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಬರೇಲಿ ನಗರದ ಸಿಬಿ ಗಂಜ್ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಮೂಳೆಗಳು ಮುರಿದಿವೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.