ಪಾಪಿಗಳು 2 ವರ್ಷದ ಮಗುವನ್ನು ಕೊಲೆ ಮಾಡಿ ಚರಂಡಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ (Doddaballapur police) ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದ ಹತ್ತಿರ ಈ ಘಟನೆ ನಡೆದಿದೆ.
ಮಂಗಳವಾರ ಸಂಜೆ ಅನುಮಾನಾಸ್ಪದ ರೀತಿಯಲ್ಲಿ ಕೆಂಪು ಬಣ್ಣದ ಸೀರೆ ಕಂಡಿದ್ದು, ಕೂಡಲೇ ಗಮನಿಸಿದ ಯುವಕರು, ಬಿಚ್ಚಿ ನೋಡಿ ಬೆಚ್ಚಿ ಬಿದ್ದಿದ್ದಾರೆ. ಎರಡು ವರ್ಷದ ಮುದ್ದು ಮಗುವನ್ನು ಸೀರೆಯಲ್ಲಿ ಸುತ್ತಿ ಕಾಲುವೆಯಲ್ಲಿ ಎಸೆದಿರುವುದು ಬೆಳಕಿಗೆ ಬಂದಿದೆ.
ಚರಂಡಿಯಲ್ಲಿ ಸಿಕ್ಕ ಮಗು ಎರಡು ವರ್ಷದ ಹೆಣ್ಣು ಮಗು ಎನ್ನುವುದು ತಿಳಿದು ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು ದೇಹದ ಮೇಲೆ ಯಾವುದೆ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.