ತುಮಕೂರು: ಶಿರಾ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿದ್ದ ಶಿರಾದಲ್ಲಿಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದಕ್ಕೂ ಮೊದಲು ಜೆಡಿಎಸ್ ಬೃಹತ್ ಶಕ್ತಿ ಪ್ರದರ್ಶನ ನಡೆಸಿತು.
ಶಿರಾ ನಗರದ ಐಬಿ ವೃತ್ತದಿಂದ ಬರಗೂರು ರಾಮಚಂದ್ರಪ್ಪ ಬಯಲು ರಂಗ ಮಂದಿರದವರೆಗೆ ಪ್ರಮುಖ ಬೀದಿಗಳಲ್ಲಿ ನಡೆದ ಬೃಹತ್ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರೋಡ್ ಶೋನಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಗರೋಪಾದಿಯಲ್ಲಿ ಪಾಲ್ಗೊಂಡಿದ್ದರು. ನಂತರ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ಬೃಹತ್ ಪ್ರಚಾರ ಸಭೆ ಆಯೋಜಿಸಲಾಗಿತ್ತು.
ಬಹಿರಂಗ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ, ಸೆರಗೊಡ್ಡಿ ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ನನಗೆ ರಾಜಕೀಯ ಗೊತ್ತಿಲ್ಲ, ಆದರೆ, ರೈತರ ಕಷ್ಟ ತಿಳಿದಿದೆ. ಶಿರಾ ಕ್ಷೇತ್ರದ ಅಭಿವೃದ್ಧಿ ನನ್ನ ಪತಿ ಸತ್ಯನಾರಾಯಣ ಅವರ ಕನಸಾಗಿತ್ತು. ಅದನ್ನು ನನಸು ಮಾಡಲು ಮತನೀಡಿ ಆಶೀರ್ವಾದ ನೀಡಿ ಎಂದು ಆಗ್ರಹಿಸಿದರು.
ಬಹಿರಂಗ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಬಂಡೆಪ್ಪ ಕಾಶೆಂಪುರ್, ರಾಜ್ಯಾಧ್ಯಕ್ಷ ನಂತರ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡುತ್ತಿದ್ದಾಗ ಅವರ ಪಕ್ಕದಲ್ಲಿಯೇ ಅಭ್ಯರ್ಥಿ ಅಮ್ಮಾಜಮ್ಮ ಪಕ್ಕದಲ್ಲಿಯೇ ನಿಂತಿದ್ದರು. ಬೆಳಿಗ್ಗೆಯಿಂದ ನಡೆದ ರೋಡ್ಶೋ, ಪ್ರಚಾರ ಸಭೆಗಳಲ್ಲೂ ಅಮ್ಮಾಜಮ್ಮ ನಿಂತುಕೊಂಡೇ ಇದ್ದರು. ಹೀಗಾಗಿ ತೀವ್ರವಾಗಿ ಬಳಲಿದ್ದರು. ಅಮ್ಮಾಜಮ್ಮ ಕುಸಿದು ಬೀಳುತ್ತಿದ್ದಂತೆ ಬಹಿರಂಗ ಸಭೆಯಲ್ಲಿದ್ದ ಶಾಸಕ ಡಾ.ಶ್ರೀನಿವಾಸಮೂರ್ತಿ ಆರೋಗ್ಯ ತಪಾಸಣೆ ನಡೆಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ತಾಯಿಯ ಸ್ಥಿತಿ ನೋಡಿ ಪುತ್ರ ಸತ್ಯಪ್ರಕಾಶ್ ಕಣ್ಣೀರಿಟ್ಟರು. ಸತ್ಯಪ್ರಕಾಶ್ ಅವರನ್ನು ಹೆಚ್.ಡಿ ಕುಮಾರಸ್ವಾಮಿ ಸಂತ್ಯೆಸಿದರು.
ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅನುಪಸ್ಥಿತಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ಪ್ರಚಾರ ಸಭೆ ಮುಂದುವರೆಸಿ ಮತಯಾಚನೆ ಮಾಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel