ಸಹೋದರಿ ನೇಹಾ ಹಿರೇಮಠ ಹತ್ಯೆ ಅತ್ಯಂತ ಹೀನ ಕೃತ್ಯವಾಗಿದ್ದು, ನಿಜಕ್ಕೂ ನೋವು ಮೂಡಿಸಿದೆ ಎಂದು ನಟ ಧ್ರುವ ಸರ್ಜಾ ಬೇಸರ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ದಲ್ಲಿ ಈ ಕುರಿತು ಬೇಸರ ವ್ಯಕ್ತಪಡಿಸಿರುವ ಧ್ರುವ ಸರ್ಜಾರ, ಸರ್ಕಾರವು ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ನಟ ಬರೆದುಕೊಂಡಿದ್ದಾರೆ.
ದ್ರುವ ಸರ್ಜಾ ಮಾಡಿರುವ ಪೋಸ್ಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ತಮ್ಮ ಸಾಮಾಜಿಕ ಕಾಳಜಿಗೆ ಧನ್ಯವಾದಗಳು. ಅಪರಾಧಿಗೆ ಇನ್ನೂ ಜೀವಂತವಾಗಿ ಇಟ್ಟಿರುವುದೇ ಒಂದು ವಿಪರ್ಯಾಸ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ನಡೆದಾಗ ಸೆಲೆಬ್ರಿಟಿಗಳು ಮೌನ ವಹಿಸಿರುತ್ತಾರೆ. ಆದರೆ, ನಿಮ್ಮ ಕೂಗು ನಿಜವಾಗಿಯೂ ಮೆಚ್ಚುವಂತದ್ದು ಎಂದು ಅಭಿಮಾನಿಗಳು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಯಾದ ದುರ್ದೈವಿ. ಪ್ರೀತಿಸಲು ನಿರಾಕರಿಸಿದ ಕಾರಣಕ್ಕಾಗಿ ಫಯಾಜ್ ಎಂಬ ವ್ಯಕ್ತಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಈ ಕೃತ್ಯಕ್ಕೆ ದೇಶದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.