ಮನೆಯಿಂದ ನಾಪತ್ತೆಯಾಗಿದ್ದ ಅಕ್ಕ ತಂಗಿ ಶವವಾಗಿ ಪತ್ತೆ…
ಶನಿವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅಕ್ಕ-ತಂಗಿ, ಚಿಕ್ಕಬಳ್ಳಾಪುರದ ಕಂದವಾರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಅಕ್ಕ-ತಂಗಿಯರಾದ ಅಗಲಗುರ್ಕಿ ಗ್ರಾಮದ ಅಶ್ವಿನಿ(16) ಮತ್ತು ನಿಶ್ಚಿತಾ(14) ಎಂದು ಗುರುತಿಸಲಾಗಿದೆ.
ಅಪ್ಪ ಅಮ್ಮ ಬೈದಿದ್ದರು ಎಂಬ ಕಾರಣಕ್ಕೆ ಮುನಿಸಿಕೊಂಡು ಅಶ್ವಿನಿ, ತನ್ನ ತಂಗಿಯನ್ನೂ ಕರೆದುಕೊಂಡು ನಿನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದಳು ಎನ್ನಲಾಗಿದೆ.
ರಾತ್ರಿ ಎಷ್ಟೊತ್ತಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಊರೆಲ್ಲಾ ಹುಡುಕಾಡಿದರೂ ಸುಳಿವು ಅವರ ಸಿಕ್ಕಿರಲಿಲ್ಲ. ಭಾನುವಾರ ಮಧ್ಯಾಹ್ನದ ಸುಮಾರಿಗೆ ಚಿಕ್ಕಬಳ್ಳಾಪುರ ನಗರದ ಕಂದವಾರ ಕೆರೆಯಲ್ಲಿ ಅಕ್ಕ-ತಂಗಿ ಇಬ್ಬರ ಶವ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.