ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ನಾಯ್ಡು ( Munirathna ) ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಎಸ್ ಐಟಿ ಕಸ್ಟಡಿಯಲ್ಲಿದ್ದಾರೆ. ಈ ಮಧ್ಯೆ ಎಸ್ ಐಟಿ ಅಧಿಕಾರಿಗಳು ( Sit Raid ) ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಮುನಿರತ್ನ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ವೈಯಾಲಿಕಾವಲ್ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ದಾಖಲೆಗಳು, ಟೆಕ್ನಿಕಲ್ ಎವಿಡೆನ್ಸ್ಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಅಲ್ಲದೇ, ಮುನಿರತ್ನ ಅವರಿಗೆ ಸಂಬಂಧಿಸಿದ ಒಟ್ಟು 15 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಎಫ್ ಎಸ್ ಎಲ್ ತಂಡ ಕೂಡ ಇದೆ.








