ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ವಸ್ತುಗಳನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಮೇ 31ರಂದು ರಾಜ್ಯಕ್ಕೆ ಬರುತ್ತೇನೆ ಎಂದು ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಮಹತ್ವದ ದಾಖಲೆ ಸಂಗ್ರಹಿಸಲು ಎಸ್‌ಐಟಿ ಮುಂದಾಗಿದೆ.
ಹಾಸನ (Hassan) ನಗರದ ಆರ್.ಸಿ. ರಸ್ತೆಯಲ್ಲಿನ ಸಂಸದರ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಎಸ್‌ಐಟಿ ಹಾಗೂ ಎಫ್ ಎಸ್ ಎಲ್ ತಂಡ ಪರಿಶೀಲನೆ ನಡೆಸಿತು. ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಪು ಸೇರಿದಂತೆ ಇನ್ನಿತರ ವಸ್ತುಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ.
ಪೂರಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಎಸ್‌ಐಟಿ ತಂಡ ಹೊರಟಿದೆ.