ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕಠಿಣ ಕ್ರಮಗಳನ್ನು ತೆಗೆದುಕೊಂಡಿವೆ. ಆ ಹಿನ್ನೆಲೆಯಲ್ಲಿ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಅಲ್ಲದೆ ಕೊರೊನಾ ಶಂಕಿತರನ್ನು ಕ್ವಾರೆಂಟೈನ್ ಮಾಡಲಾಗುತ್ತಿದೆ. ಇದೆ ಹೊತ್ತಿಗೆ ಸೋಂಕು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವಿಚಾರವಾಗಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಫುಲ್ ಗರಂ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ ಅವರು, ಸರಿಯಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಿದ್ದರೇ, ಇಷ್ಟೊತ್ತಿಗೆ ಎಲ್ಲವೂ ಸರಿಯಾಗುತ್ತಿತ್ತು. ಆದರೆ ಐಸೋಲೇಷನಿಂದ ಓಡಿ ಹೋಗುವುದು, ತಪಾಸಣೆಗೆ ಎಂದು ಬಂದವರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಇವತ್ತು ಈ ರೀತಿ ಸನ್ನಿವೇಶ ಎದುರಾಗಿದೆ. ಇದು ಒಬ್ಬರ ಪ್ರಶ್ನೆಯಲ್ಲ, ಎಲ್ಲರ ಆರೋಗ್ಯದ ಪ್ರಶ್ನೆ ಆಗಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!
ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...








