ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರೈತರ ಕ್ಷಮೆ ಕೇಳಿ, ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ರೀತಿಯ ಹೇಳಿಕೆ ಖಂಡನೀಯ. ಅನ್ನದಾತರನ್ನು ಅವಹೇಳನ ಮಾಡುವುದು ಸರಿಯಲ್ಲ. ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಸಚಿವರು ವರ್ತಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತರು ತಮ್ಮ ಹಕ್ಕು ಕೇಳುತ್ತಿರುತ್ತಾರೆ. ಕೂಡಲೇ ಸಚಿವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.