ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ : ಆರು ಮಂದಿ ಸಾವು

1 min read
Anantapur saaksha tv

ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ : ಆರು ಮಂದಿ ಸಾವು Anantapur saaksha tv

ಅನಂತಪುರ : ಭೀಕರ ಅಪಘಾತದಲ್ಲಿ ಆರು ಮಂದಿ ಮಹಿಳೆಯರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರದಲ್ಲಿ ನಡೆದಿದೆ.

ಆಟೋವೊಂದು ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃಷಿ ಕಾರ್ಮಿಕರನ್ನು ಹೊತ್ತು ಚಲಿಸುತ್ತಿತ್ತು.

ಈ ವೇಳೆ ಎದುರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಆಟೋಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Anantapur saaksha tv

ಅಲ್ಲದೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd