ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ( BS Yeddyurappa ) ಇಂದಿನಿಂದ ಎರಡು ದಿನ ತಮ್ಮ ಸ್ವಕ್ಷೇತ್ರ ಶಿಕಾರಿಪುರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಂದು ಬೆಂಗಳೂರಿನಿಂದ ಹೊರಡುವ ಸಿಎಂ ( BS Yeddyurappa ) ಸಂಜೆ 4 ಗಂಟೆಗೆ ಶಿಕಾರಿಪುರ ತಲುಪಲಿದ್ದಾರೆ.
ನಾಳೆ ಶಿಕಾರಿಪುರ ತಾಲೂಕಿನ ಕಸಬಾ ಏತ ನೀರಾವರಿ ಯೋಜನೆ, ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳದ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ : ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಸಿಎಂ : ಅಮಿತ್ ಶಾ
ಮಂಗಳವಾರ ಬೆಳಗ್ಗೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ.
ಬಳಿಕ ಮಧ್ಯಾಹ್ನ 2.30ಕ್ಕೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಇದನ್ನೂ ಓದಿ : ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಮುಂದಿನ ಎರಡೂವರೆ ತಿಂಗಳು ನಿರ್ಣಾಯಕ – ಹರ್ಷ್ ವರ್ಧನ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel