ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

SL v AFG: ಲಂಕಾ ವಿರುದ್ಧ 7 ವಿಕೆಟ್‌ಗಳ ಜಯ: ಸೆಮೀಸ್‌ ರೇಸ್‌ನಲ್ಲಿ ಜೀವಂತ ಉಳಿದ ಅಫ್ಘಾನ್‌

C Dinesh by C Dinesh
October 30, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Afghanistan

Afghanistan

Share on FacebookShare on TwitterShare on WhatsappShare on Telegram

ಫಜ಼ಲ್ಹಕ್ ಫಾರೂಕಿ(4/34) ಪರಿಣಾಮಕಾರಿ ಬೌಲಿಂಗ್‌ ಹಾಗೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನದ ನೆರವಿನಿಂದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಕನಸನ್ನ ಜೀವಂತ ಇರಿಸಿಕೊಂಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ತಾನ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡಿತು. ಪರಿಣಾಮ ಶ್ರೀಲಂಕಾ ತಂಡವನ್ನ 49.3 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಮಾಡುವಲ್ಲಿ ಯಶಸ್ವಿಯಾಯಿತು. ಬಳಿಕ ಈ ಟಾರ್ಗೆಟ್‌ ಚೇಸ್‌ ಮಾಡಿದ ಅಫ್ಘಾನಿಸ್ತಾನ 45.2 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 242 ರನ್‌ಗಳಿಸುವ ಮೂಲಕ 7 ವಿಕೆಟ್‌ಗಳ ಗೆಲುವು ಸಾಧಿಸಿತು. ಈ ಜಯದ ಮೂಲಕ ಅಫ್ಘಾನಿಸ್ತಾನ ಪ್ರಸಕ್ತ ವಿಶ್ವಕಪ್‌ನಲ್ಲಿ ತನ್ನ 3ನೇ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

Sri Lanka

ಲಂಕಾ ನೀರಸ ಬ್ಯಾಟಿಂಗ್‌:
ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಶ್ರೀಲಂಕಾ ಸಾಧಾರಣ ಆರಂಭ ಕಂಡಿತು. ಆರಂಭಿಕನಾಗಿ ಕಣಕ್ಕಿಳಿದ ಕರುಣಾರತ್ನೆ(15) ಬ್ಯಾಟಿಂಗ್‌ ವೈಫಲ್ಯಕ್ಕೆ ಸಿಲುಕಿದರು. ಆದರೆ ನಂತರ ಜೊತೆಯಾದ ನಿಸ್ಸಂಕಾ(46) ಹಾಗೂ ನಾಯಕ ಕುಸಲ್‌ ಮೆಂಡಿಸ್‌(39) 2ನೇ ವಿಕೆಟ್‌ಗೆ 62 ರನ್‌ಗಳ ಉಪಯುಕ್ತ ಜೊತೆಯಾಟವಾಡಿದರು. ಆದರೆ ನಂತರ ಬಂದ ಸಮರವಿಕ್ರಮ(36), ಅಸಲಂಕ(22), ಧನಂಜಯ(14), ಮ್ಯಾಥೀವ್ಸ್‌(23) ಹಾಗೂ ತೀಕ್ಷಣ(29) ರನ್‌ಗಳ ಸಾಧಾರಣ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿದರು. ಪರಿಣಾಮ 49.3 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್‌ ಆಯಿತು.
Fazalhaq Farooqi

ಫಾರೂಕಿ ಮಿಂಚಿನ ದಾಳಿ:
ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ತಾನದ ಪರ ಫಜ಼ಲ್ಹಕ್ ಫಾರೂಕಿ(4/34) ಅತ್ಯುತ್ತಮ ಬೌಲಿಂಗ್‌ ಪ್ರದರ್ಶಿಸಿದರು. ಇನ್ನಿಂಗ್ಸ್‌ ಆರಂಭದಿಂದಲೇ ಎದುರಾಳಿ ಪಡೆಯ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಫಾರೂಕಿ, ತಂಡದ ಗೆಲುವಿನ ಹೀರೋ ಆಗಿ ಮಿಂಚಿದರು. ಇವರಿಗೆ ಉತ್ತಮ ಸಾಥ್‌ ನೀಡಿದ ಮುಜೀಬ್‌ 2 ವಿಕೆಟ್‌ ಪಡೆದರೆ, ರಶೀದ್‌ ಖಾನ್‌ ಹಾಗೂ ಅಜ್ಮತುಲ್ಲ ತಲಾ 1 ವಿಕೆಟ್‌ ಪಡೆದರು.
Afghanistan

ಅಫ್ಘಾನ್‌ ಸಂಘಟಿತ ಆಟ:
ಶ್ರೀಲಂಕಾ ನೀಡಿದ 242 ರನ್‌ಗಳ ಟಾರ್ಗೆಟ್‌ ಬೆನ್ನತ್ತಿದ ಅಫ್ಘಾನಿಸ್ತಾನ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲೇ ರಹಮಾನುಲ್ಲಾ ಗುರ್ಬಾಜ಼್(0) ವಿಕೆಟ್‌ ಕಳೆದುಕೊಂಡು ಆಘಾತ ಕಂಡಿತು. ಆದರೆ 2ನೇ ವಿಕೆಟ್‌ಗೆ ಜೊತೆಯಾದ ಜದ್ರಾನ್‌(39) ಹಾಗೂ ರಹಮತ್‌ ಶಾ(62) 73 ರನ್‌ಗಳ ಅದ್ಭುತ ಜೊತೆಯಾಟದ ಮೂಲಕ ತಂಡದ ಗೆಲುವಿನ ಹಾದಿಯನ್ನ ಸುಗಮಗೊಳಿಸಿದರು. ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ರಹಮತ್‌ ಶಾ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಇವರಿಬ್ಬರು ಔಟಾದ ಬಳಿಕ ಜೊತೆಯಾದ ಶಾಹೀದಿ(58*) ಹಾಗೂ ಒಮರ್ಜಾಯ್(73*) ಅದ್ಭುತ ಬ್ಯಾಟಿಂಗ್‌ ಪ್ರದರ್ಶಿಸಿದರು. 4ನೇ ವಿಕೆಟ್‌ 111* ರನ್‌ಗಳ ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ತಂಡವನ್ನ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾದರು.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

June 22, 2026

SL v AFG, Afghanistan, Sri Lanka, ODI World Cup, CWC 2023

Tags: AfghanistanCWC 2023ODI World CupSL v AFGSri Lanka
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು,...

Endrick Felipe emotional letter to brother Noah

ಒಣ ಬ್ರೆಡ್ ತಿಂದಿದ್ದ ಅಮ್ಮ.. ಕಸ ಗುಡಿಸಿದ್ದ ಅಪ್ಪ.. ಬಡತನದ ಬೆಂಕಿಯ ಜ್ವಾಲೆಯಾದ ಬ್ರೆಜಿಲ್ ತಾರೆ.. ಕಣ್ಣೀರಿನ ಹಾದಿ ಮರೆಯದ ಅಣ್ಣ – ತಮ್ಮನಿಗೆ ಬರೆದ ಭಾವನಾತ್ಮಕ ಪತ್ರ..!

by admin
June 21, 2026
0

Endrick Felipe emotional letter to brother Noah ಈತನಿಗೆ ಇನ್ನೂ 20 ವರ್ಷ ಭರ್ತಿಯಾಗಿಲ್ಲ. ಆಗಲೇ ಚೊಚ್ಚಲ ಫಿಫಾ ವಿಶ್ವಕಪ್ ಆಡಿದ ಬ್ರೇಜಿಲ್‍ನ ಹದಿಹರೆಯದ ಯುವಕ....

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

Basketball courts became makeshift pitches in mexico jail

ಫುಟ್‍ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್‍ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್‍ಮ್ಯಾನ್ ಆಟವೇ ಅಸ್ತ್ರ..!

by admin
June 19, 2026
0

ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್‍ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram