SLvsIND | ಲಂಕಾ ವಿರುದ್ಧ 3ನೇ ಟಿ 20.. ಒಂದು ಗೆಲುವು.. ಹಲವು ದಾಖಲೆಗಳು
ಧರ್ಮಶಾಲಾದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ 20 ಕ್ರಿಕೆಟ್ ನಲ್ಲಿ ಹಲವಾರು ದಾಖಲೆಗಳನ್ನ ನಿರ್ಮಿಸಿದೆ.
ಶ್ರೀಲಂಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಮೂರು ಟಿ20 ಸರಣಿಯನ್ನು ಭಾರತ 3-0 ಅಂತರದಲ್ಲಿ ವಶಪಡಿಸಿಕೊಂಡಿದೆ.
ಭಾನುವಾರದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. 147 ರನ್ಗಳ ಗುರಿಯನ್ನು ಭಾರತ 16.5 ಓವರ್ಗಳಲ್ಲಿ ತಲುಪಿತು. ಇದರೊಂದಿಗೆ ಮೂರು ಪಂದ್ಯಗಳ ಟಿ 20 ಸರಣಿಯನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದೆ. ನಾಯಕರಾಗಿ ರೋಹಿತ್ ಶರ್ಮಾ ಸ್ವದೇಶದಲ್ಲಿ ಸೋಲಿಲ್ಲದ ಸರದಾರನಂತೆ ಮುನ್ನುಗ್ಗುತ್ತಿದ್ದಾರೆ.
ಒಂದು ಗೆಲುವು ಹಲವು ದಾಖಲೆಗಳು…
ಲಂಕಾ ವಿರುದ್ಧದ ಗೆಲುವಿನೊಂದಿಗೆ ಭಾರತ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಸತತವಾಗಿ ಅತಿ ಹೆಚ್ಚು ಗೆಲುವುಗಳನ್ನ ಸಾಧಿಸಿದ ತಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಈ ಹಿಂದೆ ಈ ದಾಖಲೆ ಅಪ್ಘಾನಿಸ್ಥಾನ ಮತ್ತು ರೋಮೇನಿಯಾ ತಂಡಗಳ ಪಾಲಾಗಿತ್ತು.
ಅಂತಾರಾಷ್ಟ್ರೀಯ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ 17ನೇ ಜಯ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಟಿ20ಯಲ್ಲಿ ತಂಡವೊಂದರ ವಿರುದ್ಧ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂಬ ದಾಖಲೆ ನಿರ್ಮಿಸಿದೆ. ಈ ಹಿಂದೆ ಪಾಕಿಸ್ತಾನ ಜಿಂಬಾಬ್ವೆ ವಿರುದ್ಧ 16 ಗೆಲುವುಗಳನ್ನು ದಾಖಲಿಸಿತ್ತು.
ಅಂತರಾಷ್ಟ್ರೀಯ ಟಿ20ಯಲ್ಲಿ ತವರು ನೆಲದಲ್ಲಿ ಭಾರತಕ್ಕೆ 40ನೇ ಗೆಲುವು. 39 ಗೆಲುವಿನೊಂದಿಗೆ ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿತ್ತು. ಈಗ ಆ ದಾಖಲೆ ಭಾರತದ್ದಾಗಿದೆ. SL vs IND 3rd t20 match team-india record Saaksha tv