ಹಾಸನ, ಸೆ. 21: ಗಣೇಶ (Ganesha) ಮೂರ್ತಿಗೆ ಚಪ್ಪಲಿ ಹಾರ (Slippers Garland) ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ನಗರ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಈ ಘಟನೆ ನಡೆದಿದೆ.
ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದು, ಮಹಿಳೆಯೊಬ್ಬರು ಮುಸುಕು ಧರಿಸಿ ದೇಗುಲಕ್ಕೆ ಪ್ರವೇಶಿಸಿದ್ದಾರೆ. ಸದ್ಯ ಆಕೆಯೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಬೇಲೂರಿನ ಪ್ರಸಿದ್ಧ ಗಣೇಶನ ವಿಗ್ರಹಕ್ಕೆ ಹಾರ ಹಾಕಿದ್ದಾರೆ.
ಇಂದು ಬೆಳಗ್ಗೆ ಭಕ್ತಾಧಿಗಳು ನಮಸ್ಕರಿಸಲು ಹೋದಾಗ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ. ಕೋಮು ಸೌಹಾರ್ದ ಕದಡಲು ಕೆಲವು ಕಿಡಿಗೇಡಿಗಳು ಇಂತಹ ದೃಷ್ಕೃತ್ಯ ಎಸಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಆಗ್ರಹಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








