Virat ನೂರನೇ ಟೆಸ್ಟ್ | ಟಾಸ್ ಗೆದ್ದ ಟೀಂ ಇಂಡಿಯಾ, ಬ್ಯಾಟಿಂಗ್ ಆಯ್ಕೆ
ಮೊಹಾಲಿ : ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ನೂರನೇ ಟೆಸ್ಟ್ ಪಂದ್ಯವಾಗಿದೆ. ಹೀಗಾಗಿ ಕ್ರಿಕೆಟ್ ಲೋಕ ಕಿಂಗ್ ಕೊಹ್ಲಿಗೆ ಶುಭ ಕೋರಿದೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತದ 11 ರ ಬಳಗದಲ್ಲಿ ಜಯಂತ್ ಯಾದವ್ ಕಾಣಿಸಿಕೊಂಡಿದ್ದಾರೆ.
ಸುಮಾರು 8-9 ವರ್ಷಗಳ ಬಳಿಕ ಟೀಮ್ ಇಂಡಿಯಾದ ಟೆಸ್ಟ್ ಸ್ಪೇಷಲಿಸ್ಟ್ ಗಳಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಅವರು ತಂಡದಿಂದ ಹೊರಗುಳಿದಿದ್ದಾರೆ.
ಇವರ ಜಾಗದಲ್ಲಿ ಹನುಮ ವಿಹಾರಿ ಮತ್ತು ಶ್ರೇಯಸ್ ಅಯ್ಯರ್ ಅವರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಟೀಮ್ ಇಂಡಿಯಾದ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ತೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಜಸ್ಪ್ರಿತ್ ಬೂಮ್ರಾ (ಉಪ ನಾಯಕ), ಜಯಂತ್ ಯಾದವ್, ಮಹಮ್ಮದ್ ಶಮಿ,
ಶ್ರೀಲಂಕಾ 11 ಬಳಗ
ದಿಮಿತ್ ಕರುಣರತ್ನೆ (ನಾಯಕ), ಲಹೀರು ತಿರಿಮನ್ನೆ, ಪತುಮ್ ನಿಶಾಂಕಾ, ಆಂಜಲೋ ಮ್ಯಾಥ್ಯೂಸ್, ಧನಂಜಯ್ ಡಿಸಿಲ್ವಾ, ಚರಿತ್ ಅಸಲಂಕಾ, ನಿರೊಶಾನ್ ಡಿಕ್ ವೆಲಾ, ಸುರಂಗ ಲಕ್ಮಲ್, ಲಸಿತ್ ಎಂಬುಲ್ ಡೆನಿಯಾ, ವಿಶ್ವ ಫರ್ನಾಂಡೊ, ಲಹಿರು ಕುಮಾರ.
SLvsIND 1st Test match test-team-india-chose-to-bat