ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಿಕೊಂಡ ಸ್ಮೃತಿ ಇರಾನಿ…
ಕೇಂದ್ರ ಸಚಿವ ಸಂಪುಟ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಗುರುವಾರ ವಹಿಸಿಕೊಂಡರು.
ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಹೊಂದಿದ್ದ ನಖ್ವಿ ಅವರು ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಸ್ಮೃತಿ ಇರಾನಿ ಅವರಿಗೆ ಸಲ್ಲಿಸಿದರು.
“ನಿಮ್ಮ ಶಕ್ತಿಯುತ ಮತ್ತು ಕ್ರಿಯಾತ್ಮಕ ನಾಯಕತ್ವವು ಎಲ್ಲಾ ವರ್ಗಗಳ ‘ಗೌರವದೊಂದಿಗೆ ಅಭಿವೃದ್ಧಿ’ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ನಖ್ವಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Best wishes to Union Minister for Women & Child Development Smt @smritiirani Ji on taking additional charge of Minority Affairs Ministry.Your energetic & dynamic leadership will further strengthen PM Shri @narendramodi Ji’s commitment to “Development with Dignity” of all sections pic.twitter.com/Zmii8qzp9l
— Mukhtar Abbas Naqvi (@naqvimukhtar) July 7, 2022
ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ಅಂಗೀಕರಿಸಿದ್ದು, ರಾಜ್ಯಸಭೆಯ ಅವಧಿ ಗುರುವಾರ ಕೊನೆಗೊಳ್ಳಲಿದೆ. ಇರಾನಿ ಅವರಿಗೆ ಅಸ್ತಿತ್ವದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.
ನೀಡಿದ ಜವಾಬ್ದಾರಿಯನ್ನು ಸಂಪೂರ್ಣ ಶ್ರದ್ಧೆಯಿಂದ ಪೂರೈಸುತ್ತೇನೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಮೂಲಕ ದೇಶಕ್ಕಾಗಿ ಸೇವೆ ಸಲ್ಲಿಸುವ ಸಂಕಲ್ಪದೊಂದಿಗೆ ಮುಂದುವರಿಯುತ್ತೇನೆ ಎಂದು ಸ್ಮೃತಿ ಇರಾನಿ ಅವರು ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.