Snake in meal : ಬಿಸಿಯೂಟದಲ್ಲಿ ಹಾವು : ಶಾಲಾ ಮಕ್ಕಳು ಅಸ್ವಸ್ಥ
ಮಧ್ಯಾಹ್ನ ಮಕ್ಕಳಿಗೆ ಬಡಿಸಲಾದ ಬಿಸಿಯೂಟದಲ್ಲಿ ಹಾವು ಬಿದ್ದಿತ್ತು ಎನ್ನಲಾಗಿದ್ದು , ಇದನ್ನ ಸೇವಿಸಿದ ಸುಮಾರು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ..
ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸೋಮವಾರ ನಡೆದಿರೋದಾಗಿ ತಿಳಿದು ಬಂದಿದೆ.
ಬೇಳೆ ತುಂಬಿದ್ದ ಕಂಟೈನರ್ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ.
ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ತಕ್ಷಣವೇ ರಾಂಪುರ್ ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದೆವು ಎಂದು ಅವರು ತಿಳಿಸಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಗ್ರಾಮದ ಹಲವರು ದೂರು ನೀಡಿದ್ದಾರೆ.
ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಲ್ಲೇ ಇರುವ ವಿದ್ಯಾರ್ಥಿಗೂ ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.. ಪೊಲೀಸರು ತನಿಖೆ ಕೈಗೊಂಡಿದ್ದಾರೆ..
Snake in meal , west bengal , childrens get ill








