ಸಾಮಾಜಿಕ ಮಾಧ್ಯಮ ನಿಯಂತ್ರಣಕ್ಕೆ ಕಾಯ್ದೆ: ರಾಮ್ ಮಾಧವ
ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವ ಸಂಬಂಧ ಕಾನೂನು ರಚಿಸುವ ಕಾರ್ಯದಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ರಾಮ್ ಮಾಧವ ಹೇಳಿದ್ದಾರೆ.
ಉತ್ತರಖಂಡದಲ್ಲಿ ಹಿಮಕುಸಿತ : ಸಾವಿನ ಸಂಖ್ಯೆ 67ಕ್ಕೆ ಏರಿಕೆ , 137 ಮಂದಿ ನಾಪತ್ತೆ
ಸರ್ಕಾರವನ್ನು ಉರುಳಿಸಿ, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಸಾಮರ್ಥ್ಯವನ್ನು ಸಾಮಾಜಿಕ ಮಾಧ್ಯಮಗಳು ಹೊಂದಿವೆ. ಇವು ಒಡ್ಡಿರುವ ಸವಾಲುಗಳಿಗೆ ಸಾಂವಿಧಾನಿಕ ಚೌಕಟ್ಟಿನಲ್ಲಿಯೇ ಪರಿಹಾರ ಕಂಡುಹಿಡಿಯಬೇಕು ಎಂದೂ ಅವರು ಹೇಳಿದರು. ಈ ಮೂಲಕ ಸಾಮಾಜಿಕ ಜಾಲತಾಣಗಳಿಗೆ ಮೂಗುದಾರ ಹಾಕಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಮೋದಿ ಅವರ ದುರಹಂಕಾರದ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿದೆ : ಪ್ರಿಯಾಂಕಾ ವಾದ್ರಾ..!
ಅಲ್ಲದೇ ರಾಜಕೀಯೇತರ ಹಾಗೂ ಸರ್ಕಾರೇತರ ಶಕ್ತಿಗಳ ಉದಯದೊಂದಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಒತ್ತಡ ಅನುಭವಿಸುತ್ತಿದೆ. ಈ ಶಕ್ತಿಗಳಿಂದಾಗಿ ಹೊಸ ಸವಾಲುಗಳನ್ನು ಸಹ ಎದುರಿಸುತ್ತಿದೆ ಎಂದು ವಿಶ್ಲೇಷಿಸಿದ್ದಾರೆ. ಇದಕ್ಕಾಗಿ ಹೊಸ ನಿಯಮ-ಕಾನೂನು ರೂಪಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ.