‘ಭಾರತೀಯ ರೂಪಾಂತರ ವೈರಸ್ ಉಲ್ಲೇಖಿತ ಕಂಟೆಂಟ್ ತೆಗೆಯಿರಿ’
ಕೊರೊನಾ ವೈರಸ್ನ ‘ಭಾರತೀಯ ರೂಪಾಂತರ’ ಪದವನ್ನು ಬಳಸಿರುವ ಅಥವಾ ಸೂಚಿಸುವ ಯಾವುದೇ ಕಂಟೆಂಟ್ಗಳನ್ನು ತಮ್ಮ ವೇದಿಕೆಯಿಂದ ತಕ್ಷಣ ತೆಗೆದುಹಾಕುವಂತೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಲ್ಲ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದ್ದು, ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತೀಯ ರೂಪಾಂತರ ಎಂಬ ಪದವನ್ನು ತನ್ನ ಯಾವುದೇ ವರದಿಯಲ್ಲಿ ಕೊರೊನಾ ವೈರಸ್ ನ ಬಿ .1.617 ರೂಪಾಂತರದೊಂದಿಗೆ ಸಂಯೋಜಿಸಿಲ್ಲ ಎಂದು ಪ್ರತಿಪಾದಿಸಿದೆ.
ಈ ನಿಟ್ಟಿನಲ್ಲಿ ಐಟಿ ಸಚಿವಾಲಯವು, ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.