ಬೆಂಗಳೂರು : ಸರ್ಕಾರ ರಚನೆ ಆದಾಗಲೇ ನನಗೆ ಸಮಾಜ ಕಲ್ಯಾಣ ಇಲಾಖೆ ನೀಡುವಂತೆ ಸಿಎಂ ಯಡಿಯೂರಪ್ಪ ಅವರ ಬಳಿ ಕೇಳಿಕೊಂಡಿದ್ದೆ. ಆದರೆ ಆಗ ಹಲವು ಕಾರಣಗಳಿಂದ ಆರೋಗ್ಯ ಇಲಾಖೆ ನೀಡಿದ್ದರು. ಈಗ ಸಮಾಜ ಕಲ್ಯಾಣ ಇಲಾಖೆ ನೀಡಿದ್ದಾರೆ. ಇದನ್ನು ಸಂತೋಷದಿಂದ ಒಪ್ಪಿಕೊಂಡಿದ್ದೇನೆ ಎಂದು ಸಚಿವ ಬಿ ಶ್ರೀರಾಮುಲು ( B Sriramulu ) ಹೇಳಿದ್ದಾರೆ.
ದಿಢೀರ್ ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.
ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ( B Sriramulu) ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದ ಸಿಎಂ ಅಸಮಾಧಾನವನ್ನು ಶಮನಗೊಳಿಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಸರ್ಕಾರ ರಚನೆ ವೇಳೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ.
ಆದರೆ ಆಗ ಹಲವು ಕಾರಣಗಳಿಂದ ಆರೋಗ್ಯ ಇಲಾಖೆ ನೀಡಿದ್ದರು. ಈಗ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಒಳ್ಳೆಯ ಕೆಲಸ ಮಾಡಬೇಕು ಎಂದು ಸಿಎಂ ಸಲಹೆ ನೀಡಿದ್ದಾರೆ.
ಇದನ್ನೂ ಓದಿ : ರಾಮುಲು ಸಂಧಾನ ಸಕ್ಸಸ್ ಆಯ್ತಾ..? ಸಿಎಂ ಯಡಿಯೂರಪ್ಪ ಹೇಳಿದ ಕಿವಿಮಾತೇನು..!
ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ.ಜಾತಿ ಮತ್ತು ಪಂಗಡ ಪರವಗಿ ಕೆಲಸ ಮಾಡಲು ಸಿಎಂ ಸೂಚಿಸಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ.
ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ.
ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಸುಧಾಕರ್ ಮಾತನಾಡಿ, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು.
ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು.
ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ನುಚ್ಚು ನೂರಾಯಿತೇ ಡಿಸಿಎಂ ಕನಸು : ಬಿಜೆಪಿಯಲ್ಲಿ ಇವರು ಆಟಕ್ಕುಂಟು ಲೆಕ್ಕಕ್ಕಿಲ್ಲ..?
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel