ತುಮಕೂರು ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಮುಂದುವರೆದಿದ್ದು, ಬಿಜೆಪಿಯ ಹಿರಿಯ ಮುಖಂಡ ಸೊಗಡು ಶಿವಣ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಟಿಕೆಟ್ ಕೈ ತಪ್ಪಿದ್ದರ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿ, ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಇ ಮೇಲ್ ಮುಖಾಂತರ ರಾಜಿನಾಮೆ ಪತ್ರ ರವಾನೆ ಮಾಡಿದ್ದಾರೆ.
ಸೊಗಡು ಶಿವಣ್ಣ ಅವರು ಟಿಕೆಟ್ ತಪ್ಪಿದ್ದರ ಹಿನ್ನೆಲೆಯಲ್ಲಿ ಬೆಂಬಲಿಗರ ಸಭೆ ಕರೆದಿದ್ದರು. ಸಭೆಯಲ್ಲಿ ತೀರ್ಮಾನಿಸಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ನನಗೆ ಕೆಲವು ಪಕ್ಷಗಳಿಂದ ಆಫರ್ ಬಂದಿವೆ. ಕಾರ್ಯಕರ್ತರೊಂದಿಗೆ ಮಾತನಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.








