ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಬಳಿಕ ಕಳೆದ ವರ್ಷ ಸ್ಥಾಪಿಸಲಾಗಿದ್ದ ವಿಷ್ಣುವರ್ಧನ್ ಪ್ರತಿಮೆ ತೆರವು ಮಾಡಲು ಕೆಲ ದಿನ ತೀರ್ಮಾನ ಆಗಿತ್ತು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮಾತುಕತೆಯ ಮೂಲಕವೇ ಪ್ರತಿಮೆ ತೆರವಿಗೆ ನಿರ್ಧಾರ ಮಾಡಲಾಗಿತ್ತು. ಆದರೆ, ಅಭಿಮಾನಿಗಳು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ನಾನು ಜಿಲ್ಲಾ ಪ್ರವಾಸದಲ್ಲಿದ್ದು ಬೆಂಗಳೂರಿಗೆ ವಾಪಸ್ ಬಂದ ಬಳಿಕ ವಿಷ್ಣು ಅಭಿಮಾನಿಗಳನ್ನು ಕರೆದು ಮಾತನಾಡುತ್ತೇನೆ ಎಂದಿದ್ದಾರೆ.
ಟೋಲ್‍ಗೇಟ್ ವೃತ್ತವನ್ನು ಬಾಲಗಂಗಾಧರನಾಥ ಸ್ವಾಮೀಜಿ ವೃತ್ತ ಎಂದು 40 ವರ್ಷಗಳ ಹಿಂದೆಯೇ ಸರ್ಕಾರ ಆದೇಶ ಹೊರಡಿಸಿದೆ. ವೃತ್ತದಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆ ಮಾಡಿ ನಿರ್ಮಾಣ ಮಾಡಲು ಈ ಹಿಂದೆಯೇ ಚರ್ಚೆ ನಡೆದಿತ್ತು. ಟೋಲ್‍ಗೇಟ್ ವೃತ್ತ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಪಾರ್ಕ್ ಅಥವಾ ವಿಜಯನಗರ ಬಸ್ ನಿಲ್ದಾಣದಲ್ಲಿ ವಿಷ್ಣು ಪ್ರತಿಮೆ ಸ್ಥಾಪಿಸುವ ಕುರಿತು ಮಾತುಕತೆ ನಡೆದಿತ್ತು ಎಂದು ಸೋಮಣ್ಣ ಮಾಹಿತಿ ನೀಡಿದ್ದಾರೆ.
ರಾತ್ರೋರಾತ್ರಿ ಪ್ರತಿಮೆ ತೆಗೆದಿದ್ದೇಕೆ ಎಂದ ಅನಿರುದ್ಧ್
ಮಾಗಡಿ ರಸ್ತೆಯ ಟೋಲ್‍ಗೇಟ್ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವುದನ್ನು ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಖಂಡಿಸಿದ್ದಾರೆ.

ಪ್ರತಿಮೆ ತೆಗೆಯುವುದೇ ಆಗಿದ್ದರೆ ರಾತ್ರೋ ರಾತ್ರಿ ತೆರವು ಮಾಡುವ ಅಗತ್ಯವೇನಿತ್ತು. ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ, ಈ ರೀತಿ ಮಾಡುವುದರಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತಾಗುತ್ತದೆ. ಪ್ರತಿಮೆ ವಿಚಾರದಲ್ಲಿ ಪ್ರತಿ ಬಾರಿಯೂ ಅಪ್ಪಾಜಿ ಅವರ ವಿಚಾರದಲ್ಲಿ ಯಾಕೆ ಹೀಗಾಗುತ್ತಿದೆ ಎಂದು ಅನಿರುದ್ಧ್ ಬೇಸರ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








