ಬೆಂಗಳೂರು: ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಬಿಜೆಪಿ ಸೋಮಶೇಖರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಡುರಸ್ತೆಯಲ್ಲೇ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಜೆಡಿಎಸ್ ಕಾರ್ಯಕರ್ತರು ಕೂಡ ಭಾಗಿಯಾಗಿದ್ದಾರೆ. ಕೆಂಗೇರಿ ಹೊಯ್ಸಳ ಸರ್ಕಲ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿ ಜವರಾಯೀಗೌಡ ಭಾಗಿಯಾಗಿದ್ದರು. ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ವಿರುದ್ಧ ಬಿಜೆಪಿ ನಾಯಕರು ಬುಧವಾರ ಸ್ಪೀಕರ್‌ಗೆ ದೂರು ನೀಡಲಿದ್ದಾರೆ. ಇವರ ಶಾಸಕತ್ವ ಅನರ್ಹತೆ ಮಾಡುವಂತೆ ದೂರು ನೀಡಲು ಮುಂದಾಗಲಾಗಿದೆ.