ಕೌಟುಂಬಿಕ ಕಲಹ : ತಂದೆಯನ್ನೆ ಬರ್ಬರವಾಗಿ ಕೊಂದ ಮಗ kolar
ಕೋಲಾರ : ಸ್ವಂತ ಮಗನೇ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಂಬೇಡ್ಕರ್ ಪಾಳ್ಯದಲ್ಲಿ ತಡ ರಾತ್ರಿ ನಡೆದಿದೆ.
ವೆಂಕಟೇಶ್ (65) ಮೃತ ದುರ್ದೈವಿಯಾಗಿದ್ದು, ನವೀನ್ ತಂದೆಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ನವೀನ್ ಮತ್ತು ವೆಂಕಟೇಶ್ ನಡುವೆ ಜಗಳ ಪ್ರಾರಂಭವಾಗಿದೆ.
ಬಳಿಕ ಮಾತಿಗೆ ಮಾತು ಬೆಳೆದು ತಡರಾತ್ರಿ ನವೀನ್ ಮನೆಯಲ್ಲಿದ್ದ ರುಬ್ಬುವ ಗುಂಡಿನಿಂದ ತಲೆಗೆ ಹೊಡೆದ್ದಾನೆ.
ಪರಿಣಾಮ ವೆಂಕಟೇಶ್ ತೀವ್ರ ರಕ್ತ ಸ್ರಾವದಿಂದಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನೆ ಬಳಿಕ ನವೀನ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರು ನವೀನ್ ರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೆÇಲೀಸ್ ಠಾಣೆ ಪ್ರಕರಣ ದಾಖಲಾಗಿದೆ.









