ಆಸ್ತಗಾಗಿ ತಾಯಿಯನ್ನು ಕೊಂದ ಕ್ರೂರಿ ಮಗ
ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಬೆನ್ನೂರು ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಮಗ ಕೊಲೆಮಾಡಿದ್ದಾನೆ
ಶಾಂತವ್ವ ಕಲ್ಲಪ್ಪ ಅಣ್ಣಿಗೇರಿ(65) ಮೃತ ದುರ್ದೈವಿ. ಬಸವರಾಜ್ ಕಲ್ಲಪ್ಪ ಅಣ್ಣಿಗೇರಿ ತಾಯಿಯನ್ನೆ ಕೊಲೆ ಮಾಡಿದ ಮಗ. ಮಗ ತಾಯಿಯನ್ನು ಕೊಲೆ ಮಾಡಿರುವ ವಿಷಯ ನೆರೆಹೊರೆಯವರಿಗೆ ತಿಳಿಯುತ್ತಿದ್ದಂತೆ ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾರಣವೇನು?
ಬಸವರಾಜ್ ನಿತ್ಯವೂ ‘ಆಸ್ತಿಯನ್ನು ನನಗೆ ಕೊಡು’ ಎಂದು ತಾಯಿಯನ್ನು ಪೀಡಿಸಿ ಕಿರುಕುಳ ನೀಡುತ್ತಿದ್ದ. ಇದಕ್ಕೆ ಶಾಂತವ್ವ ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ ಸೋಮವಾರ(ಇಂದು) ಬಸವರಾಜ್ ಮತ್ತೆ ಆಸ್ತಿಗಾಗಿ ಪೀಡಿಸಿದ್ದು, ಶಾಂತವ್ವನನ್ನು ಹೊಡೆಯಲು ಮುಂದಾಗಿದ್ದಾನೆ. ಈ ವೇಳೆ ಅಲ್ಲೇ ಇದ್ದ ದೊಣ್ಣೆಯಿಂದ ಶಾಂತವ್ವನನ್ನು ಹೊಡೆದಿದ್ದಾನೆ. ಪರಿಣಾಮ ಆಕೆ ಮೃತಪಟ್ಟಿದ್ದಾಳೆ.