ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಪುತ್ರ ಆತ್ಮಹತ್ಯೆ JDS saaksha tv
ಮೈಸೂರು : ಜೆಡಿಎಸ್ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಗಿದ್ದಾರೆ. 32 ವರ್ಷದ ಪ್ರದೀಪ್ ಮೃತ ವ್ಯಕ್ತಿಯಾಗಿದ್ದಾರೆ.
ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಪಂ ಮಾಜಿ ಅಧ್ಯಕ್ಷರಾಗಿದ್ದಾರೆ.
ಪ್ರದೀಪ್ ಗುರುವಾರ ರಾತ್ರಿ ಅಪಾರ್ಟ್ ಮೆಂಟ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆದ್ರೆ ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನ ಈ ಸಂಭಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,









