ನವದೆಹಲಿ: ಕೊರೊನಾದಿಂದಾಗಿ ದೇಶವೇ ತಲ್ಲಣಗೊಂಡಿದೆ. ಈ ಪರಿಸ್ಥಿತಿಯಲ್ಲಿ ಕೊರೊನಾ ವೈರಸ್ ವಿರುದ್ಧ ಸಮರಕ್ಕಾಗಿ ಹಣವನ್ನು ಕಾಪಿಡಲು ಕೇಂದ್ರ ಸರ್ಕಾರಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 5 ಕ್ರಮಗಳನ್ನು ಸೂಚಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದಾರೆ.
ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ?
ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ಸೋನಿಯಾ ಭಾರತ ಸರ್ಕಾರಕ್ಕೆ ಖರ್ಚು ಉಳಿಯಲು ಬಜೆಟ್ನಲ್ಲಿ (ಸಂಬಳ, ಪಿಂಚಣಿ ಮತ್ತು ಕೇಂದ್ರ ವಲಯದ ಯೋಜನೆಗಳನ್ನು ಹೊರತುಪಡಿಸಿ) ಶೇಕಡಾ 30 ರಷ್ಟು ಅನುಪಾತದಲ್ಲಿ ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಅಧಿಕಾರಿಗಳ ಎಲ್ಲಾ ವಿದೇಶಿ ಭೇಟಿಗಳನ್ನು ತಡೆಹಿಡಿಯಬೇಕು ಎಂದು ಅವರು ಸೂಚಿಸಿದ್ದಾರೆ.
ಅಲ್ಲದೆ ಎರಡು ವರ್ಷಗಳ ವರೆಗೆ “ಮಾಧ್ಯಮ ಜಾಹೀರಾತುಗಳಾದ ಟೆಲಿವಿಷನ್, ಪ್ರಿಂಟ್ ಮತ್ತು ಆನ್ಲೈನ್ ಮೇಲೆ ಸಂಪೂರ್ಣ ನಿಷೇಧ ಹೇರಿ ” ಎಂದು ಸೂಚಿಸಿದ್ದಾರೆ. 20,000 ಕೋಟಿ ರೂ.ಗಳ ಸೆಂಟ್ರಲ್ ವಿಸ್ಟಾ ಬ್ಯೂಟಿಫಿಕೇಷನ್ಸ್ ಯೋಜನೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಪ್ರಧಾನ ಮಂತ್ರಿಗೆ ಮನವಿ ಮಾಡಿದ್ದಾರೆ. ಹಾಗೇ ಸರ್ಕಾರಿ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಮೀಸಲಿಟ್ಟಿರುವ ಹಣವನ್ನು ಕೊರೊನಾ ನಿಯಂತ್ರಣಕ್ಕೆ ಬಳಸಬಹುದೆಂದು ಸೋನಿಯಾ ಗಾಂಧಿ ಹೇಳಿದ್ದಾರೆ.








