ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್. ಈ ವಿಚಾರದಲ್ಲಿ ರಾಷ್ಟ್ರೀಯ ನಾಯಕರು ರಾಷ್ಟ್ರಮಟ್ಟದಲ್ಲಿ ತೆಗೆದುಕೊಂಡಿರುವ ತೀರ್ಮಾನ. ಇವತ್ತಿನವರೆಗೂ ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ರಾಷ್ಟ್ರೀಯ ನಾಯಕರು ನಮಗೆ ನೀಡುವ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇದೆ ವೇಳೆ ದೇವೇಗೌಡರಿಗೆ ಬೆಂಬಲ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್ ಕುಮಾರಸ್ವಾಮಿ ಅವರು ಹಿರಿಯರಿದ್ದಾರೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನಮ್ಮ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಅವರು ನಮಗೆ ನೀಡುವ ಆದೇಶವನ್ನು ನಾವು ಪಾಲಿಸುತ್ತೇವೆ. ಇದು ಪಕ್ಷದ ಅಧ್ಯಕ್ಷನಾಗಿ ನನ್ನ ಅಭಿಪ್ರಾಯ’ಹಾಗಾಗಿ ದೇವೇಗೌಡರಿಗೆ ಬೆಂಬಲ ನೀಡುವುದನ್ನು ಸೋನಿಯಾ ಗಾಂಧಿ ಅವರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.