ಬೆಂಗಳೂರು: ರಾಜ್ಯದಿಂದ ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿ (Sonia Gandhi) ಹೋಗಬಹುದು ಎಂಬ ಸಂಶಯ ವ್ಯಕ್ತವಾಗುತ್ತಿದೆ.
ಈ ಕುರಿತು ಡಿಸಿಎಂ ಶಿವಕುಮಾರ್ (DK Shivakumar) ಮನವಿ ಮಾಡಿದ್ದು, ಇದಕ್ಕೆ ಸೋನಿಯಾ ಗಾಂಧಿ ಅವರು ಒಪ್ಪಿ ರಾಜ್ಯಸಭೆಗೆ ಹೋಗಬಹುದು ಎನ್ನಲಾಗುತ್ತಿದೆ. ತೆಲಂಗಾಣ ಕಾಂಗ್ರೆಸ್ ಸಿಎಂ ಆಯ್ಕೆಯ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ಡಿಕೆಶಿ ಈ ಪ್ರಸ್ತಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಜ್ಯಸಭಾ ಚುನಾವಣೆಯು ಮಾರ್ಚ್ ನಲ್ಲಿ ಸ್ಪರ್ಧೆ ಮಾಡಿ ಆಯ್ಕೆಯಾಗಬಹುದು. ಎಲ್ಲಾ ನಾಯಕರು ಈ ವಿಚಾರದಲ್ಲಿ ಆಸಕ್ತಿ ಹೊಂದಿದ್ದಾರೆ. 1999 ರಿಂದ ಸೋನಿಯಾ ಗಾಂಧಿ ಲೋಕಸಭೆ ಚುನಾವಣೆ ಗೆಲ್ಲುತ್ತಿದ್ದಾರೆ. 1999ರಲ್ಲಿ ರಾಜ್ಯದ ಬಳ್ಳಾರಿ ಹಾಗೂ ಉತ್ತರ ಪ್ರದೇಶದ ಅಮೇಠಿಯಿಂದ ಗೆಲುವು ಸಾಧಿಸಿದ್ದರು. 2004ರಿಂದ ರಾಯ್ ಬರೇಲಿಯಿಂದು ಸತತ ಗೆಲುವು ಸಾಧಿಸುತ್ತಿದ್ದಾರೆ. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎನ್ನಲಾಗಿದೆ.