ಕೋವಿಡ್ ಅನಾರೋಗ್ಯ – ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…
ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಆಸ್ಪತ್ರೆಯಲ್ಲಿ ಇರಿಸಲಾಗುವುದು ಎಂದು ಅವರು ಹೇಳಿದರು.
ಮತ್ತೆ ಸಮನ್ಸ್ ಜಾರಿ ಮಾಡಿದ ಇಡಿ
ಕಾಂಗ್ರೆಸ್ ಕಾರ್ಯಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೋನಾ ಸಂಕಷ್ಟ ಎದುರಿಸುತ್ತಿರುವುದರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಿದೆ. ಇದೀಗ ಜೂನ್ 23ರಂದು ಅವರನ್ನು ವಿಚಾರಣೆಗೆ ಕರೆಯಲಾಗಿದೆ.
ಈ ಹಿಂದೆ ಇಡಿ ಜೂನ್ 8 ರಂದು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಕರೆದಿತ್ತು, ಆದರೆ ಕರೋನಾ ಸೋಂಕಿಗೆ ಒಳಗಾಗಿದ್ದರಿಂದ ಅವರು ಮೂರು ವಾರಗಳ ಕಾಲಾವಕಾಶವನ್ನು ಕೋರಿದ್ದರು.








