Sonia Gandhi | ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಹೆಜ್ಜೆ
ಮಂಡ್ಯ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಜ್ಜೆ ಹಾಕಿದ್ದಾರೆ.
ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪಾದಯಾತ್ರೆ ಶುರುವಾಗಿದೆ.
ಪೂರ್ವನಿಗದಿಯಂತೆ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು.
ಆ ಮೂಲಕ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಹೆಜ್ಜೆ ಹಾಕಿದರು.
11 ಗಂಟೆಗೆ ನಾಗಮಂಗಲದ ಚೌಡೇನಹಳ್ಳಿ ಬಳಿ ವಿಶ್ರಾಂತಿ ಪಡೆದು ಸಂಜೆ 4ಕ್ಕೆ ಪಾದಯಾತ್ರೆ ಮುಂದೆ ಸಾಗಲಿದೆ.
ಸಂಜೆ ಏಳು ಗಂಟೆಗೆ ಮಂಡ್ಯದ ಬ್ರಹ್ಮದೇವರಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ನಾಯಕರು ವಾಸ್ತವ್ಯ ಮಾಡಲಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ದೆಹಲಿಯಿಂದ ಸೋನಿಯಾ ಗಾಂಧಿ ಕಬಿನಿಯ ಹಿನ್ನಿರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್ ನಲ್ಲಿ ವಾಸ್ತವ್ಯ ಮಾಡಿದರು.
ರಾಹುಲ್ ಗಾಂಧಿ ಜೊತೆ ಎಐಸಿಸಿ ಅಧ್ಯಕ್ಷಗಿರಿಯ ಚುನಾವಣೆ ಬಗ್ಗೆ ಸೋನಿಯಾ ಗಾಂಧಿ ಚರ್ಚೆ ನಡೆಸಿದರು.