ಬ್ಲಾಕ್ ಫಂಗಸ್ ಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿ : ಮೋದಿಗೆ ಸೋನಿಯಾ ಪತ್ರ Sonia Gandhi
ನವದೆಹಲಿ : ಕೊರೊನಾ ಹೆಮ್ಮಾರಿಯ ಕಾಟ ಮಧ್ಯೆ ದೇಶದಲ್ಲಿ ಬ್ಲಾಕ್ ಫಂಗಸ್ ಸಂಕಷ್ಟ ಕೂಡ ಜನರನ್ನು ಆತಂಕಕ್ಕೆ ಗುರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬ್ಲಾಕ್ ಫಂಗಸ್ ಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಬ್ಲಾಕ್ ಸೋಂಕಿಗೊಳಗಾಗಿರುವ ರೋಗಿಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಅಲ್ಲದೇ ಆಯುಷ್ಮಾನ್ ಭಾರತ್ ಯೋಜನೆಯಡಿ ಹಾಗೂ ಆರೋಗ್ಯ ವಿಮಾ ಯೋಜನೆಗಳಲ್ಲಿ ಈ ಸೋಂಕನ್ನು ಸೇರಿಸಿಲ್ಲ. ತಕ್ಷಣವೇ ಇದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ದೇಶದಲ್ಲಿ ಅಗತ್ಯವಾದ ಔಷಧ ಕಂಡು ಬರುತ್ತಿಲ್ಲ. ಇದಕ್ಕೆ ಬೇಕಾಗಿರುವ ಔಷಧಗಳ ಉತ್ಪಾದನೆ ಹಾಗೂ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ನಿಗಾ ವಹಿಸಬೇಕು.
ಬ್ಲ್ಯಾಕ್ ಫಂಗಸ್ ಔಷಧ ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಪ್ಪಿಸಬೇಕು ಎಂದು ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.