Sonia Gandhi : ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ…
ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರನ್ನು ಇಂದು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಂತರ ಆಸ್ಪತ್ರೆಯಿಂದ ಹೆಲ್ತ ಬುಲೆಟಿನ್ ಬಿಡುಗಡೆ ಮಾಡಲಾಗಿದೆ ಎಂದು PTI ವರದಿ ಮಾಡಿದೆ.
“ಯುಪಿಎ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಇಂದು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಡಾ. ಅರೂಪ್ ಬಸು ಮತ್ತು ಅವರ ತಂಡದ ಆರೈಕೆಯಲ್ಲಿ ಎದೆಯ ವೈದ್ಯಕೀಯ ವಿಭಾಗದಲ್ಲಿ ದಾಖಲಾಗಿದ್ದಾರೆ. ಶ್ರೀಮತಿ ಗಾಂಧಿ ಅವರನ್ನ ವೀಕ್ಷಣೆ ಮತ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈರಲ್ ಉಸಿರಾಟದ ಸೋಂಕಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ ಅಜಯ್ ಸ್ವರೂಪ್ ಹೇಳಿದ್ದಾರೆ.
ಮಂಗಳವಾರ ಸಂಜೆ ಸೋನಿಯಾ ಗಾಂಧಿ ಅವರು ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದೆ.
Sonia Gandhi: Former Congress President Sonia Gandhi admitted to Delhi’s Gangaram Hospital…








