ನವದೆಹಲಿ ; ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಎಷ್ಟು ಸಮಯದವರೆಗೆ ಲಾಕ್ ಡೌನ್ ಮುಂದುವರಿಸುತ್ತದೆ, ಲಾಕ್ ಡೌನ್ ನಿರ್ಣಯಕ್ಕೆ ಬಳಸುತ್ತಿರುವ ಮಾನದಂಡಗಳೇನು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ಮುಖ್ಯಮಂತ್ರಿಗಳೊಂದಿಗೆ ದೆಹಲಿಯಿಂದ ಇಂದು ಬೆಳಗ್ಗೆ ವಿಡಿಯೋ ಕಾನೆರೆನ್ಸ್ ಮೂಲಕ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಭೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಈವರೆಗೆ ಮೂರು ಬಾರಿ ಲಾಕ್ ಡೌನ್ ವಿಸ್ತರಿಸಿದೆ. ಯಾವ ಮಾನದಂಡದ ಮೇಲೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಮೇ 17ರಂದು ಲಾಕ್ ಡೌನ್-3 ಕೊನೆಗೊಳ್ಳಲಿದೆ. ಇದಾದ ನಂತರ ಮುಂದೇನು.. ಹೇಗೆ. ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಪ್ರಶ್ನಿಸಿದರು.
ಈ ಸಭೆಯಲ್ಲಿ ಮುಖ್ಯಮಂತ್ರಿಗಳಲ್ಲದೆ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಿ ಚಿದಂಬರಂ, ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್, ರಂದೀಪ್ ಸಿಂಗ್ ಸುರ್ಜೆವಾಲಾ ಇತರರು ಸಭೆಯಲ್ಲಿ ಭಾಗವಹಿಸಿದ್ದರು.