ಹೈದರಾಬಾದ್: ಇತ್ತೀಚೆಗೆ ದಕ್ಷಿಣ ಭಾರತದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಅವರ ಮದುವೆ ಸಂಬಂಧಿತ ಸುದ್ದಿಗಳು ಹರಿದಾಡುತ್ತಿದ್ದವು. ಕಾಜಲ್ (kajal agarval) ಮುಂಬೈ ಮೂಲದ ಉದ್ಯಮಿ ಜೊತೆಗೆ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಾರೀ ಸದ್ದು ಮಾಡಿತ್ತು. ಇದೀಗ ಈ ಗುಮಾನಿಗಳಿಗೆ ಖುದ್ದು ಕಾಜಲ್ ಅಗರ್ವಾಲ್ ಅವರೇ ತೆರೆ ಎಳೆದಿದ್ದಾರೆ.

ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಈ ವಿಚಾರವನ್ನ ಖುದ್ದು ನಟಿ ಕಾಜಲ್ ಅಗರ್ವಾಲ್ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
“ಕಾಲಚಕ್ರದಲ್ಲಿ” ‘ವಶಿಷ್ಠನ’ ಅವತಾರಕ್ಕೆ ಅಭಿಮಾನಿಗಳು ಫಿದಾ : ಟೀಸರ್ ಹೇಗಿದೆ ಗೊತ್ತಾ..!
ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿರುವುದಾಗಿ ತಿಳಿಸಿದ್ದಾರೆ ಕಾಜಲ್.

ಇನ್ನೂ ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ.
ಕಾಜಲ್ ಅಗರ್ವಾಲ್ ಮದುವೆ ಆಗುತ್ತಿರುವ ಗೌತಮ್ ಕಿಟ್ಜು ಅವರು ಡಿಸರ್ನ್ ಲಿವಿಂಗ್ ಸಂಸ್ಥೆಯ ಸ್ಥಾಪಕರು.
ಕಾಜಲ್ ಮದುವೆ ವಿಚಾರ ಬಹಿರಂಗಪಡಿಸುತ್ತಿದ್ದಂತೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








