Sooryakumar yadav : ವಿರಾಟ್ ಹೆಸರಿನಲ್ಲಿದ್ದ ದಾಖಲೆ ಮುರಿದ ಸೂರ್ಯಕುಮಾರ್…
ಚಾಣಾಕ್ಷ ಬ್ಯಾಟಿಂಗ್ ಮೂಲಕ T20 ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬ್ಯಾಟ್ಸ್‌ಮನ್ ಎನಿಸಿರುವ ಸೂರ್ಯಕುಮಾರ್, ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾದ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿಯ ದಾಖಲೆಯನ್ನ ಬ್ರೇಕ್ ಮಾಡಿದ್ದಾರೆ.
ಪ್ರಸಕ್ತ ನ್ಯೂಜಿ಼ಲೆಂಡ್ ಅಂಗಳದಲ್ಲಿ ನಡೆದ ಟಿ20 ಸರಣಿಯಲ್ಲೂ ಟೀಂ ಇಂಡಿಯಾ ಗೆಲುವಿನ ರೂವಾರಿಯಾಗಿ ಟಿ20 ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಸೂರ್ಯಕುಮಾರ್, ಆ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆ ಬ್ರೇಕ್ ಮಾಡಿದ್ದಾರೆ. 2022ರಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್, ಪ್ರಸಕ್ತ ವರ್ಷದಲ್ಲಿ 3ನೇ ಬಾರಿಗೆ ಟಿ20 ಸರಣಿ ಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನ ಬ್ರೇಕ್ ಮಾಡುವಲ್ಲಿ ಸೂರ್ಯಕುಮಾರ್ ಯಾದವ್ ಯಶಸ್ವಿಯಾಗಿದ್ದಾರೆ. ಈ ಹಿಂದೆ 2016ರಲ್ಲಿ ವಿರಾಟ್ ಕೊಹ್ಲಿ, ಎರಡು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಮಿಂಚಿದ್ದರು.
ನ್ಯೂಜಿ಼ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಿಂದ 124 ರನ್‌ಗಳಿಸಿದ್ದರು. ಸೂರ್ಯಕುಮಾರ್ ಅವರ ಜವಾಬ್ದಾರಿಯುತ ಆಟದಿಂದ ಭಾರತ ತಂಡ ಎರಡನೇ ಪಂದ್ಯದಲ್ಲಿ 65 ರನ್‌ಗಳ ಗೆಲುವು ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿತು.
Sooryakumar yadav : Sooryakumar broke the record in the name of Virat…