ನಿರ್ಮಾಪಕರಾದ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಏ. 15ರಂದು ಹಾಸನ ಜಿಲ್ಲೆಯ ಹಿರಿಸಾವೆ ಹತ್ತಿರವಿರುವ ಫಾರಂ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಅವರು ತಮ್ಮ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ನಟ ಹಾಗೂ ನಿರ್ಮಾಪಕ ರವಿಗೌಡ ಮಾಹಿತಿ ನೀಡಿದ್ದಾರೆ.
ಸದ್ಯ ಸೌಂದರ್ಯ ಜಗದೀಶ್ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರ ಮಾಡಲಾಗಿದೆ. ಏ. 15ರ ಬೆಳಿಗ್ಗೆ 9ರ ವರೆಗೆ ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಸಾರ್ವಜನಿಕರು ಹಾಗೂ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಉದ್ಯಮಿಯಾಗಿದ್ದ ಜಗದೀಶ್ ಅವರು ಅಪ್ಪು ಮತ್ತು ಪಪ್ಪು, ಸ್ನೇಹಿತರು, ರಾಮ್ ಲೀಲಾ, ಮಸ್ತ್ ಮಜಾ ಮಾಡಿ ಚಿತ್ರಗಳನ್ನು ನಿರ್ಮಿಮಿಸಿದ್ದರು. ಸದ್ಯ ಅವರ ಅಗಲಿಕೆಗೆ ಇಡೀ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.