ಕ್ಯಾಪ್ಟನ್ಸಿಗೆ ಕೊಹ್ಲಿ ಗುಡ್ ಬೈ… ಅದು ವೈಯಕ್ತಿಕ ನಿರ್ಧಾರ ಎಂದ ದಾದಾ
ಟೀಂ ಇಂಡಿಯಾ ಟೆಸ್ಟ್ ನಾಯಕತ್ವಕ್ಕೆ ವಿದಾಯ ಹೇಳುವ ವಿರಾಟ್ ಕೊಹ್ಲಿ ನಿರ್ಧಾರದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.
ಭಾರತ ತಂಡವನ್ನು ಎಲ್ಲಾ ಫಾರ್ಮೆಟ್‌ಗಳಲ್ಲಿ ಮುಂಚೂಣಿಯಲ್ಲಿರಿಸುವಲ್ಲಿ ವಿರಾಟ್ ಪ್ರಮುಖ ಪಾತ್ರ ವಹಿಸಿದ್ದಾರೆ.
ನಾಯಕತ್ವದಿಂದ ಕೆಳಗಿಳಿಯುವುದು ಅವರ ವೈಯಕ್ತಿಕ ನಿರ್ಧಾರವಾಗಿದ್ದು, ಬಿಸಿಸಿಐ ಅದನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.
ನಿರೀಕ್ಷಿತ ಫಲಿತಾಂಶ ಬರದ ಕಾರಣ ತಂಡದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ಆದರೆ, ಆಟಗಾರನಾಗಿಯೇ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಗಂಗೂಲಿ, ‘ವಿರಾಟ್ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ಎಲ್ಲಾ ಮಾದರಿಯಲ್ಲೂ ಅದ್ಭುತ ಪ್ರದರ್ಶನ ನೀಡಿದೆ.
Under Virats leadership Indian cricket has made rapid strides in all formats of the game ..his decision is a personal one and bcci respects it immensely ..he will be an important member to take this team to newer heights in the future.A great player.well done ..@BCCI @imVkohli
— Sourav Ganguly (@SGanguly99) January 15, 2022
ಅವರ ವೈಯಕ್ತಿಕ ನಿರ್ಧಾರವನ್ನು ಬಿಸಿಸಿಐ ಗೌರವಿಸುತ್ತದೆ. ಅವರು ತಂಡದ ಪ್ರಮುಖ ಸದಸ್ಯರಾಗಿದ್ದಾರೆ.
ಭವಿಷ್ಯದಲ್ಲಿ ತಂಡವನ್ನು ಉನ್ನತ ಶಿಖರಗಳಿಗೆ ಕೊಂಡೊಯ್ಯುವಲ್ಲಿ ಅವರು ತಮ್ಮ ಪಾತ್ರವನ್ನು ನಿರ್ವಹಿಸುವ ಭರವಸೆ ಇದೆ. ಶ್ರೇಷ್ಠ ಆಟಗಾರ. ವೆಲ್ಡನ್’ ಎಂದು ಕೊಹ್ಲಿಯನ್ನು ಹೊಗಳಿದ್ದಾರೆ.
ಕೊಹ್ಲಿ ಟಿ20 ನಾಯಕತ್ವದಿಂದ ಕೆಳಗಿಳಿದ ನಂತರ, ಬಿಸಿಸಿಐ ಅವರನ್ನು ಏಕದಿನ ನಾಯಕತ್ವದಿಂದ ವಜಾಗೊಳಿಸಿತು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೊಹ್ಲಿ, ಬಿಸಿಸಿಐ ತನ್ನೊಂದಿಗೆ ಸಮಾಲೋಚಿಸದೆ ನಿರ್ಧಾರ ತೆಗೆದುಕೊಂಡಿದೆ ಮತ್ತು ಗಂಗೂಲಿ ಈ ಬಗ್ಗೆ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದ್ದರು.








