South Indian Bank Recruitment 2025 : ಸೌತ್ ಇಂಡಿಯನ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರಮೋಷನ್ ಆಫೀಸರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ದಿನಾಂಕ 30/04/2025ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 7,44,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳು – ರೂ. 500
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳು – ರೂ. 200
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 26, 2025








