ಬಹುಭಾಷಾ ನಟಿ, ಗಾಯಕಿ ಆಂಡ್ರಿಯಾ ಜೆರೆಮಿಯಾಗೆ ಕೊರೊನಾ ಪಾಸಿಟಿವ್
ದೇಶದಲ್ಲಿ ಕೊರೊನಾ ಹೆಮ್ಮಾರಿಯಿಂದ ನಿತ್ಯ ಸಾವಿರಾರು ಜನರು ಪ್ರಾಣ ಕಳೆದುಕೊಳ್ತಿದ್ದಾರೆ. ಸ್ಯಾಂಡಲ್ ವುಡ್ , ಬಾಲಿವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಸೇರಿ ಸಿನಿಮಾರಂಗದವರು, ಸೆಲೆಬ್ರಿಟಿಗಳು ತಾರೆಯರು ಕೂಡ ಮಹಾಮಾರಿಗೆ ಬಲಿಯಾಗಿದ್ದಾರೆ. ಇದೀಗ ಬಹುಭಾಷಾ ನಟಿ ಹಾಗೂ ಜನಪ್ರಿಯ ಗಾಯಕಿ ಆಂಡ್ರಿಯಾ ಜೆರೆಮಿಯಾ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದ ಬಗ್ಗೆ ನಟಿ ಹೇಳಿಕೊಂಡಿದ್ದಾರೆ.
ಸದ್ಯ ವೈದ್ಯದ ಸಲಹೆಯಂತೆ ಕಳೆದ ಒಂದು ವಾರದಿಂದ ಮನೆಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದಾರೆ. ಸೋಂಕು ತಗುಲುತ್ತಿದ್ದಂತೆ ಸಾಮಾಜಿಕ ಜಾಲತಾಣದಿಂದ ಕೆಲ ಕಾಲ ದೂರ ಉಳಿದಿದ್ದ ನಟಿ ತಡವಾಗಿ ಈ ವಿಚಾರವನ್ನ ಹಂಚಿಕೊಂಡಿದ್ದಾರೆ. ‘ನನ್ನ ಸ್ನೇಹಿತರು ಹಾಗೂ ಕುಟುಂಬಸ್ಥರು ಸರಿಯಾದ ಸಮಯದಲ್ಲಿ ನೆರವಿಗೆ ಬಂದರು. ಈಗಲೂ ನಾನು ಕ್ವಾರಂಟೈನ್ ನಲ್ಲಿದ್ದೇನೆ. ಕೋವಿಡ್ ಸಂಕಷ್ಟದಲ್ಲಿ ದೇಶ ಸಿಲುಕಿರುವಾಗ ಏನು ಮಾಡುವುದೆಂದು ತೋಚುತ್ತಿಲ್ಲ, ಎಂದು ಇನ್ಸ್ಟಾಗ್ರಾಂನಲ್ಲಿ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಹಾಡಿನ ವಿಡಿಯೋವನ್ನ ಸಹ ಶೇರ್ ಮಾಡಿಕೊಂಡಿದ್ದಾರೆ.
ಸರ್ಕಾರದ ಜೊತೆ ಕೊರೊನಾ ವಿರುದ್ಧ ಹೋರಾಟದಲ್ಲಿ ಜನರು ಕೈಜೋಡಿಸಬೇಕಾಗಿದೆ. ಜನರು ಸುಖಾಸುಮ್ಮನೆ ಅನಗತ್ಯವಾಗಿ ಹೊರಗಡೆ ಓಡಾಡದೇ , ಗುಂಪಿನಲ್ಲಿ ಬೆರೆಯದೇ , ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ತಮ್ಮನ್ನ ತಾವು ರಕ್ಷಣೆ ಮಾಡಿಕೊಳ್ಳಬೇಕಿದೆ.