ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ
ಚೆನ್ನೈ, ಅಗಸ್ಟ್22: ಪ್ರಸ್ತುತ ಕೊರೋನವೈರಸ್‌ಗೆ ಚಿಕಿತ್ಸೆ ಪಡೆಯುತ್ತಿರುವ ಗಾಯಕ-ನಟ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ, ಆದರೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ದಾಖಲಾಗಿರುವ ಎಸ್ ಪಿ ಬಾಲಸುಬ್ರಹ್ಮಣ್ಯಂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ವೆಂಟಿಲೇಟರ್ ಮತ್ತು ಇಸಿಎಂಒ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿದಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯಕೀಯ ತಜ್ಞರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ.
ನಿರಂತರ ಚಿಕಿತ್ಸೆಯಿಂದ ಅವರ ಆರೋಗ್ಯ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗಿದೆ. ಬಾಲಸುಬ್ರಮಣ್ಯಂ ಅವರು ಶೀಘ್ರವೇ ಗುಣಮುಖರಾಗುವಂತೆ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.