ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕರಾದ ಎಸ್ ಪಿ ಬಾಲಸುಬ್ರಮಣ್ಯಮ್ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗುತ್ತಿದೆ. ಇನ್ನೂ ಮುಂದಿನ 24 ಗಂಟೆಗಳ ಕಾಲ ಏನನ್ನೂ ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿರುವುದು ಸದ್ಯ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಈ ಹಿಂದೆ ಅಂದರೆ ಆಗಸ್ಟ್ 5 ರಂದು ಕೊರೊನಾ ಪಾಸಿಟಿವ್ ಬಂದಿದ್ದ ಕಾರಣ ಎಸ್ ಪಿ ಬಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಕೊರೊನಾ ದೃಢಪಟ್ಟ ಬಗ್ಗೆ ಸ್ವತಃ ಬಾಲಸುಬ್ರಮಣ್ಯಮ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದರು. ಅದಾದ ಬಳಿಕ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಲೈಫ್ ಸಪೋರ್ಟರ್ ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.








