ಈಗಾಗಲೇ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕರಾದ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗುತ್ತಿದೆ. ಇದೀಗ ಮತ್ತೊಂದು ಆತಂಕಕಾರಿ ಮಾಹಿತಿ ಹೊರಬಿದ್ದಿದ್ದು, ಬಾಲಸುಬ್ರಮಣ್ಯಂ ಅವರ ಪತ್ನಿ ಸಾವಿತ್ರಿ ಬಾಲಸುಬ್ರಮಣ್ಯಂ ಅವರಿಗೂ ಕೊರೊನಾ ಧೃಡವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆ ಅಂದರೆ ಆಗಸ್ಟ್ 5 ರಂದು ಕೊರೊನಾ ಪಾಸಿಟಿವ್ ಬಂದಿದ್ದ ಕಾರಣ ಎಸ್ ಪಿ ಬಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಕೊರೊನಾ ದೃಢಪಟ್ಟ ಬಗ್ಗೆ ಸ್ವತಃ ಬಾಲಸುಬ್ರಮಣ್ಯಮ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದರು. ಅದಾದ ಬಳಿಕ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಲೈಫ್ ಸಪೋರ್ಟರ್ ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ಮತ್ತೆ ಸಿನಿಮಾದತ್ತ ಮುಖ ಮಾಡಿದ ಪ್ರೀತಿ ಜಿಂಟಾ!
ಬಾಲಿವುಡ್ ನಟಿ ಪ್ರೀತಿ ಜಿಂಟಾ ಮತ್ತೆ ಬಣ್ಣ ಹಚ್ಚಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ನಟಿ ಪ್ರೀತಿ ಮದುವೆಯಾಗಿ ವಿದೇಶದಲ್ಲಿ ಪತಿಯೊಂದಿಗೆ ಇದ್ದಾರೆ. ಅವರು...