ಚೆನ್ನೈ : ಸಂಗೀತ ಸರದಾರ, ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆ ಮುಂದೆ ಅವರ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಿನ್ನೆ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ನಿನ್ನೆಯಿಂದಲೇ ಆಸ್ಪತ್ರೆಯ ಬಳಿ ಜಮಾಯಿಸುತ್ತಿರುವ ಅಭಿಮಾನಿಗಳು ಹೆಲ್ತ್ ಬುಲೆಟಿನ್ ಗಾಗಿ ಕಾಯುತ್ತಿದ್ದಾರೆ.
ಹಲವರು ಸ್ಥಳದಲ್ಲೇ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇನ್ನು ಆಸ್ಪತ್ರೆ ಬಳಿ ಸದ್ಯ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಆಸ್ಪತ್ರೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣ ಆಗಿದೆ.
ಆಗಸ್ಟ್ 5ರಂದು ಎಸ್ ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು.
ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ ಬಿಪಿಗೆ ಚಿಕಿತ್ಸೆ ನೀಡಿವೆ. ಆಗಸ್ಟ್ 24ರಂದು ಎಸ್ ಪಿಬಿ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.