ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಹುಲ್ ಭಾಷಣಕ್ಕೆ ಕತ್ತರಿ ಹಾಕಿದ ಸ್ಪೀಕರ್

ರಾಹುಲ್ ಸವಾಲು

Author2 by Author2
July 3, 2024
in National, Politics, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಲೋಕಸಭಾ ಕಲಾಪದಲ್ಲಿ ಆರ್ಭಟಿಸುತ್ತಿರುವ ರಾಹುಲ್ ಗಾಂಧಿ, ಬಿಜೆಪಿ ಮೈತ್ರಿಕೂಟ ಎನ್‌ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಮಂಗಳವಾರ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ರಾಹುಲ್ ಮಾತಿಗೆ ಕೆಲವು ಬಾರಿ ಬೇಸರ ವ್ಯಕ್ತಪಡಿಸಿ, ಕ್ಲಾಸ್ ನ್ನು ತೆಗೆದುಕೊಂಡಿದ್ದಾರೆ. ಆದರೆ, ಈಗ ರಾಹುಲ್ ಗಾಂಧಿ ಭಾಷಣದ ಕೆಲವು ಭಾಗಗಳನ್ನು ಕಡತದಿಂದಲೇ ತೆಗೆದು ಹಾಕವಂತೆ ಆದೇಶ ನೀಡಿದ್ದಾರೆ.

ಈ ತೀರ್ಮಾನಲಕ್ಕೆ ಸಂಬಂಧಿಸಿದಂತೆ ಈಗ ರಾಹುಲ್ ಗಾಂಧಿ ಸ್ಪೀಕರ್ ಗೆ ಸವಾಲು ಹಾಕಿದ್ದಾರೆ. ರಾಹುಲ್ ಗಾಂಧಿ ಸೋಮವಾರ ಭಾಷಣ ಮಾಡುವ ಸಂದರ್ಭದಲ್ಲಿ ಬಳಸಿದ ಕೆಲವು ಪದಗಳು ಹಾಗೂ ಪ್ರಸ್ತಾಪಿಸಿದ ಕೆಲವು ವಿಷಯಗಳು ಬಿಜೆಪಿಯ ಆಕ್ರೋಶ ಹಾಗೂ ಆಕ್ಷೇಪಕ್ಕೆ ಕಾರಣವಾಗಿದ್ದವು. ಪ್ರಧಾನಿ ಮೋದಿ ಅವರೇ ಎರಡು ಬಾರಿ ಎದ್ದು ನಿಂತು ರಾಹುಲ್ ಗಾಂಧಿ ಭಾಷಣಕ್ಕೆ ಆಕ್ಷೇಪ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿಯೇ ರಾಹುಲ್ ಗಾಂಧಿ ಭಾಷಣದ ಕೆಲವು ಅಂಶಗಳನ್ನು ಸ್ಪೀಕರ್ ಓಂ ಬಿರ್ಲಾ ಕಡತದಿಂದ ತೆಗೆದು ಹಾಕುವಂತೆ ಸೂಚಿಸಿದ್ದಾರೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರ ಈ ನಡೆಯನ್ನು ಪ್ರಶ್ನಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಲೋಕಸಭೆಯ ನೀತಿ ನಿರೂಪಣಾ ನಿಯಮಗಳ ರೂಲ್ ನಂಬರ್ 380 ರ ಅಡಿ ಕೆಲವು ಪದ ಮಾತ್ರ ತೆಗೆದು ಹಾಕಲು ನಿಮಗೆ ಅಧಿಕಾರವಿದೆ. ಆದರೆ, ನೀವು ಏಕಪಕ್ಷೀಯವಾಗಿ ನಡೆದುಕೊಂಡಿದ್ದೀರಿ. ನನ್ನ ಭಾಷಣದಲ್ಲಿ ಯಾವೆಲ್ಲಾ ಅಂಶಗಳನ್ನ ಕಡತದಿಂದ ತೆಗೆದು ಹಾಕಲಾಗಿದೆ ಎಂದು ಗಮನಿಸಿದಾಗ ನಿಜಕ್ಕೂ ಆಘಾತವಾಯ್ತು. ನನ್ನ ಭಾಷಣದ ಪ್ರಮುಖ ಭಾಗಗಳನ್ನೇ ಕಡತದಿಂದ ತೆಗೆಯಲಾಗಿದೆ. ಲೋಕಸಭೆಯ ರೂಲ್ ನಂಬರ್ 380 ರ ಅಡಿ ಬಾರದ್ದನ್ನೂ ತೆಗೆದು ಹಾಕಲಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಲೋಕಸಭಾಧ್ಯಕ್ಷರನ್ನೂ ಪ್ರಶ್ನಿಸಿದ್ದಾರೆ.

ನಾನು ಲೋಕಸಭೆಯಲ್ಲಿ ವಾಸ್ತವಾಂಶಗಳನ್ನು ದೇಶದ ಜನರ ಮುಂದಿಡಲು ಯತ್ನಿಸಿದ್ದೇನೆ. ಸತ್ಯ ಸಂಗತಿಗಳನ್ನೇ ನಾನು ಹೇಳಿದ್ದೇನೆ. ನನಗಿರುವ ಸಿಕ್ಕಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಕೆ ಮಾಡಿಕೊಂಡಿದ್ದೇನೆ. ಸದನದಲ್ಲಿ ಇರುವ ಎಲ್ಲರೂ ಜನರ ಭಾವನೆಗಳನ್ನು ಕಲಾಪದಲ್ಲಿ ವ್ಯಕ್ತಪಡಿಸಬೇಕು. ಇದು ಎಲ್ಲ ಸಂಸದರ ಹಕ್ಕು ಕೂಡ. ಸದನದಲ್ಲಿ ಜನರ ಆಶೋತ್ತರಗಳನ್ನು, ಭಾವನೆಗಳನ್ನು ಪ್ರಶ್ನಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ಧಾರೆ.

ಹೀಗಾಗಿಯೇ ನಾನು ಎಲ್ಲ ಹಕ್ಕು ಹಾಗೂ ಸ್ವಾತಂತ್ರ್ಯಗಳನ್ನು ಬಳಕೆ ಮಾಡಿಕೊಂಡು ಸದನದಲ್ಲಿ ನನ್ನ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಜನರ ಭಾವನೆಗಳನ್ನು ನಾನು ಬಿಂಬಿಸಿದೆ. ಆದರೆ ನನ್ನ ಭಾಷಣದ ಪ್ರಮುಖಾಂಶಗಳನ್ನೇ ಕಡತದಿಂದ ತೆಗೆಯಲಾಗಿದೆ. ಇದು ಸಂಸದೀಯ ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದಂತಹ ನಿಲುವು. ಬಿಜೆಪಿಯು ಯಾವಾಗಲೂ ಜನರ ಧ್ವನಿ ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ , ಅಲ್ಲ, ಭಾಷಣದ ಮುಖ್ಯಾಂಶಗಳೊಂದಿಗೆ ನೀಟ್ ಪರೀಕ್ಷಾ ಹಗರಣ, ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆ ಕುರಿತಾಗಿ ರಾಹುಲ್ ಗಾಂಧಿ ಆಡಿದ್ದ ಮಾತುಗಳನ್ನೂ ಕಡತದಿಂದ ತೆಗೆದು ಹಾಕುವಂತೆ ಸೂಚನೆ ನೀಡಲಾಗಿದೆ. ಇದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ. ಜನರ ಧ್ವನಿಯನ್ನೇ ಬಿಜೆಪಿ ಅಡಗಿಸಿದಂತಿದೆ. ಜನರ ಸಮಸ್ಯೆಗಳನ್ನು ಪ್ರಶ್ನಿಸಬಾರದೇ? ಎಂದು ಕಾಂಗ್ರೆಸ್ ಪ್ರಶ್ನಿಸುತ್ತಿದೆ. ನೀವು ಕಡತದಿಂದ ತೆಗೆದು ಹಾಕಿರಬಹುದು. ಆದರೆ, ಜನರ ನೋವನ್ನು ನಿಮ್ಮಿಂದ ತೊಡೆದು ಹಾಕಲು ಆಗುತ್ತಿಲ್ಲ. ಆ ಕೆಲಸ ನಾವು ಮಾಡುತ್ತೇವೆ ಎಂದು ರಾಹುಲ್ ಗುಡುಗಿದ್ದಾರೆ.

Tags: Speaker who cut Rahul's speech
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram