ಬೆಂಗಳೂರು : “ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಟ್ವೀಟ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯೆ ನೀಡಿ, ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಎಂದಿದ್ದಾರೆ.
ನಗರದ ಬಿಜೆಪಿ ಕಚೇರಿ ಬಳಿ ಮಾತನಾಡಿದ ಸುಧಾಕರ್, ಕುಮಾರಸ್ವಾಮಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ನನಗೂ ಅವರ ಮೇಲೆ ವಿಶೇಷ ಗೌರವವಿದೆ ಅಷ್ಟೇ ಎಂದರು.
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಭೇಟಿ ಕುರಿತು ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣದ ಬಗ್ಗೆ ಮಾಹಿತಿ ಕೇಳಿದ್ದರು. ಸೋಮಕಿನ ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅವರಿಗೆ ವರದಿ ಕೊಟ್ಟಿದ್ದೇವೆ. ಅವರು ಕೂಡ ಈ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. 65 ಸಾವಿರ ಇರುವ ಟೆಸ್ಟಿಂಗ್ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸುವಂತೆ ಹೇಳಿದರು ಎಂದು ತಿಳಿಸಿದರು.