ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ವಿಶೇಷ ಅನುದಾನ : ಸಿಎಂ Backward Classes saaksha tv
ಬೆಂಗಳೂರು : ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್ ಗಳಿಗೆ ವಿಶೇಷ ಅನುದಾನ ನೀಡುವ ಕುರಿತು ಸಮಾಲೋಚನೆ ನಡೆಸಲಾಗುವುದು. ಮುಂದಿನ ಬಜೆಟ್ ನಲ್ಲಿ ಇದನ್ನು ಅನುಷ್ಠಾನಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಕಲಾಪದಲ್ಲಿ ಸದಸ್ಯ ನಾಗೇಂದ್ರ ಅವರ ಪ್ರಶ್ನೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರಿಸಿದ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ , ಮುಂದಿನ ಬಜೆಟ್ ನಲ್ಲಿ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ವಿಶೇಷ ಅನುದಾನ ಒದಗಿಸುವ ಸಂಬಂಧ ಶೀಘ್ರದಲ್ಲೇ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಇನ್ನು ಈವರೆಗೂ ಪ್ರದೇಶವಾರು ಅನುದಾನ ನೀಡಲಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿತ್ತು. ಇದನ್ನು ತಪ್ಪಿಸುವ ಕಾರಣಕ್ಕಾಗಿ ಇನ್ನು ಮುಂದೆ ವಿಶೇಷ ಅನುದಾನ ನೀಡುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು