ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಭಾಪತಿ ಅವಿಶ್ವಾಸ ನಿರ್ಣಯದ ನೆಪ: ಗೋಹತ್ಯೆ ಕಾಯ್ದೆ ಪಾಸ್‍ಗೆ ಮಂಗಳವಾರ ವಿಶೇಷ ಅಧಿವೇಶನ..?

Kariyappa N by Kariyappa N
December 12, 2020
in Newsbeat, Politics, Samagra karnataka, Uncategorized, ರಾಜ್ಯ
council
Share on FacebookShare on TwitterShare on WhatsappShare on Telegram

==ಗೋಹತ್ಯೆ ನಿಷೇಧ ಮಸೂದೆಗೆ ಪಾಸ್‌ಗೆ ಬಿಜೆಪಿ ಸರ್ಕಸ್==

ಬೆಂಗಳೂರು: ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗೆ ಅನುಮೋದನೆ ಪಡೆಯಲು ರಾಜ್ಯ ಬಿಜೆಪಿ ಸರ್ಕಾರ ಸಭಾಪತಿಗಳ ವಿರುದ್ಧದ ಅವಿಶ್ವಾನ ನಿರ್ಣಯವನ್ನು ಮುಂದಿಟ್ಟುಕೊಂಡು ಒಂದು ದಿನದ ವಿಧಾನಪರಿಷತ್‍ನ ವಿಶೇಷ ಅಧಿವೇಶನ ಕರೆಯಲು ಮುಂದಾಗಿದೆ.
ಈ ಸಂಬಂಧ ರಾಜ್ಯಪಾಲ ವಜುಬಾಯ್ ವಾಲಾರನ್ನು ಭೇಟಿ ಮಾಡಿದ್ದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪರಿಷತ್ ವಿಶೇಷ ಅಧಿವೇಶನ ಕರೆಯಲು ಸಭಾಪತಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದರು.

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಇದರ ಬೆನ್ನಲ್ಲೇ ವಿಧಾನಪರಿಷತ್ ಕಲಾಪವನ್ನ ಮುಂದುವರಿಸುವಂತೆ ಅಥವಾ ಒಂದು ವಿಶೇಷ ಅಧಿವೇಶನ ನಡೆಸುವಂತೆ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಗಳು ವಿಧಾನಪರಿಷತ್ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.


ಡಿಸೆಂಬರ್15 ರಂದು ಮಂಗಳವಾರ ಬೆಳಿಗ್ಗೆ 11ಕ್ಕೆ ವಿಧಾನಪರಿಷತ್ ಅಧಿವೇಶನ ಕರೆಯಬೇಕು. ನಿಯಾಮವಳಿಗಳಂತೆ ಅವಿಶ್ವಾಸ ನಿರ್ಣಯ ಕುರಿತು ಚರ್ಚಿಸಲು ಅನುವು ಮಾಡಿಕೊಡಬೇಕೆಂದು ನಿರ್ದೇಶನ ನೀಡುವಂತೆ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಪತ್ರದಲ್ಲಿ ಸೂಚನೆ ನೀಡಿದ್ದಾರೆ.
ಸರ್ಕಾರ ನಿಗದಿ ಮಾಡಿದ ಕಾರ್ಯಕಲಾಪಗಳ ಪಟ್ಟಿಯಂತೆ ಡಿಸೆಂಬರ್ 15ರವರೆಗೆ ಪರಿಷತ್ ಕಲಾಪ ನಡೆಯಬೇಕಿತ್ತು. ಆದರೆ ವಿಧಾನಪರಿಷತ್‍ನ ಕಲಾಪ ಸಲಹಾ ಸಮಿತಿಯಲ್ಲಿ ಯಾವುದೇ ತೀರ್ಮಾನವಾಗದೇ ಇದ್ದರೂ ಸಭಾಪತಿಗಳು ಅಧಿವೇಶನವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿವೇಶನವನ್ನು ಈ ಹಿಂದೆ ನಿಗದಿ ಮಾಡಿದಂತೆ ಡಿ.15ರವರೆಗೆ ಮುಂದುವರೆಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ಸದಸ್ಯರು ದೂರು ಹೋಗಿದ್ದಲ್ಲಿ ಕಡೆಯ ಪಕ್ಷ ಡಿ.15ರಂದು ಬೆಳಿಗ್ಗೆ 11ಗಂಟೆಗೆ ಸಭೆ ಕರೆದು ನಿಯಮಾವಳಿಗಳಂತೆ ಸಭಾಪತಿ ವಿರುದ್ಧ ನೀಡಲಾದ ಅವಿಶ್ವಾಸ ನಿರ್ಣಯದ ಸೂಚನೆ ಚರ್ಚಿಸಲು ಅನುವು ಮಾಡಿಕೊಡಲು ಹಾಗೂ ಇತರೆ ಸರ್ಕಾರಿ ಕಾರ್ಯಕಲಾಪ ನಡೆಯಬೇಕಾಗಿರುವುದರಿಂದ ಮಂಗಳವಾರ ವಿಶೇಷ ಅಧಿವೇಶನ ಕರೆಯುವಂತೆ ಪತ್ರದಲ್ಲಿ ಪರಿಷತ್ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಸರ್ಕಾರದ ನಡೆ ಹಿಂದಿದೆ ಗೋಹತ್ಯೆ ನಿಷೇಧ ಕಾಯ್ದೆ..?
ಗ್ರಾಮ ಪಂಚಾಯಿತಿಗಳ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಗುರುವಾರ ವಿಧಾನಮಂಡಲ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮೊಟಕುಗೊಳಿಸಲಾಗಿದೆ. ಹೀಗಾಗಿ ಬಿಜೆಪಿಯ ಮಹತ್ವಾಕಾಂಕ್ಷೆಯ ಗೋಹತ್ಯೆ ನಿಷೇಧ ಮಸೂದೆ ವಿಧಾನ ಪರಿಷತ್‍ನಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಲೇ ಇಲ್ಲ. ವಿಧಾನಸಭೆಯ ಅನುಮೋದನೆ ಪಡೆಯುವ ಹೊತ್ತಿಗಾಗಲೇ ವಿಧಾನ ಪರಿಷತ್ ಕಲಾಪವನ್ನು ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ಅನಿರ್ಧಿಷ್ಟಾವಧಿಗೆ ಮುಂದೂಡಿದ್ದರು.
ಈ ಹಿನ್ನೆಲೆಯಲ್ಲಿ ಗೋಹತ್ಯೆ ಮಸೂದೆ ಅಸೆಂಬ್ಲಿಯಲ್ಲಿ ಪಾಸ್ ಆಗಿದ್ದರೂ ಮಸೂದೆ ಸ್ವರೂಪ ಸಿಕ್ಕಿಲ್ಲ. ಹೀಗಾಗಿ ಮತ್ತೊಮ್ಮೆ ವಿಧಾನಪರಿಷತ್‍ನ ಅಧಿವೇಶನ ಕರೆದು ಗೋಹತ್ಯೆ ಮಸೂದೆಗೆ ಅಂಕಿತ ಪಡೆಯುವುದು ಬಿಜೆಪಿ ಸರ್ಕಾರದ ಪ್ಲಾನ್ ಎನ್ನಲಾಗಿದೆ.


ವಿಶೇಷ ಅಧಿವೇಶನಕ್ಕೆ ಬಿಜೆಪಿಗೆ ನೆಪ ಸಿಕ್ಕಿರುವುದು ವಿಧಾನಪರಿಷತ್ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ವಿರುದ್ಧದ ಅವಿಶ್ವಾಸ ನಿರ್ಣಯ. ಅಧಿವೇಶನ ಆರಂಭಕ್ಕೂ ಮೊದಲೇ ಬಿಜೆಪಿ, ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಪ್ರತಾಪ್ ಚಂದ್ರಶೆಟ್ಟಿ ಕಾಂಗ್ರೆಸ್‍ನವರಾದ ಕಾರಣ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಿ, ಜೆಡಿಎಸ್ ಬೆಂಬಲ ಪಡೆದು ಬೇರೆಯವರನ್ನು ಸಭಾಪತಿ ಸ್ಥಾನಕ್ಕೆ ಕೂರಿಸುವುದು ಬಿಜೆಪಿ ಲೆಕ್ಕಾಚಾರ.
ಭೂಸ್ವಾಧೀನ ಕಾಯ್ದೆಯನ್ನು ಸರ್ಕಾರ ಜೆಡಿಎಸ್ ಬೆಂಬಲ ಪಡೆದು ಪರಿಷತ್‍ನ ಅನುಮೋದನೆ ಪಡೆದುಕೊಂಡಿದೆ. ಅದೇ ರೀತಿ ಗೋಹತ್ಯೆ ನಿಷೇಧ ಜಾಯ್ದೆಗೂ ವಿಧಾನ ಪರಿಷತ್‍ನಲ್ಲಿ ಅನುಮೋದನೆ ಪಡೆದುಕೊಳ್ಳಬೇಕಿದೆ. ಪರಿಷತ್‍ನಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ, ಜೆಡಿಎಸ್‍ನ ಬೆಂಬಲ ಪಡೆಯಲು ಮುಂದಾಗಿದೆ.
ಮೂಲಗಳ ಪ್ರಕಾರ, ಸಭಾಪತಿ ಸ್ಥಾನದಿಂದ ಕಾಂಗ್ರೆಸ್‍ನವರಾದ ಪ್ರತಾಪ್‍ಚಂದ್ರ ಶೆಟ್ಟಿ ಅವರನ್ನು ಕೆಳಗಿಳಿಸಿ ಆ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಡುವುದು. ಇದರ ಮೂಲಕ ಜೆಡಿಎಸ್‍ನ ಸಹಕಾರದೊಂದಿಗೆ ಸರ್ಕಾರ ತರುವ ಎಲ್ಲಾ ಮಸೂದೆಗಳನ್ನು ಸುಲಭವಾಗಿ ಪಾಸ್ ಮಾಡಿಕೊಳ್ಳುವುದು ಬಿಜೆಪಿಯ ಲೆಕ್ಕಾಚಾರವಾಗಿದೆ.
ಈ ಕಾರಣಕ್ಕಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಷತ್‍ನಲ್ಲಿ ಮಂಡಿಸಿ ಅನುಮೋದನೆ ಪಡೆದ ಕಾಯ್ದೆಯಾಗಿ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಾಗಿದ್ದಾರೆ. ಒಂದು ವೇಳೆ ಸುಗ್ರೀವಾಜ್ಞೆ ತಂದರೂ ಮುಂದಿನ ಅಧಿವೇಶನ ವೇಳೆ ಮತ್ತೆ ಮಂಡಿಸಿ ಅನುಮತಿ ಪಡೆಯಬೇಕು. ಹೀಗಾಗಿ ಒಂದು ದಿನದ ವಿಶೇಷ ಅಧಿವೇಶನವನ್ನು ಅವಿಶ್ವಾಸ ನಿರ್ಣಯದ ನೆಪದ ಮೂಲಕ ಕರೆದು ತನ್ನ ಕಾರ್ಯ ಸಾಧಿಸಿಕೊಳ್ಳಲು ಬಿಜೆಪಿ ಹೊರಟಿದೆ ಎನ್ನಲಾಗಿದೆ.
ಸರ್ಕಾರದ ನಿರ್ಣಯವನ್ನು ಸಭಾಪತಿಗಳು ಒಪ್ಪುತ್ತಾರಾ ? ಮತ್ತೊಂದು ಕಾನೂನು ಸಮರಕ್ಕೆ ದಾರಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongresscow slaughter billlegislative council sessionpratapchandra shettyspecial session
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram