ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊರೊನಾದಿಂದ ಶೀಘ್ರ ಗುಣಮುಖರಾಗಲಿ ಎಂದು ಶಿವಮೊಗ್ಗದ ಶಿಕಾರಿಪುರದ ಹುಚ್ಚರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಇಂದು ಮುಂಜಾನೆ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಆಗಮಿಸಿದ ಸಿಎಂ ಪುತ್ರ, ಸಂಸದ ರಾಘವೆಂದ್ರ ಅವರು ತಮ್ಮ ಆರಾಧ್ಯ ದೈವ ಹುಚ್ಚರಾಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯಡಿಯೂರಪ್ಪ ಅಭಿಮಾನಿಗಳು ಹಾಜರಿದ್ದರು.
ಇನ್ನು ಕೊರೊನಾ ಸೋಂಕಿಗೆ ತುತ್ತಾಗಿರುವ ಸಿಎಂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ರವಾನಿಸಿರುವ ಅವರು, ಯಾರಿಗೂ ಆತಂಕ ಬೇಡ, ನಾನು ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.